ಬೆಳಗಾವಿ: ಟ್ರ್ಯಾಕ್ಟರ್ ಟ್ರೈಲರ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿದ್ದು, 20 ಜನ ಗಾಯಗೊಂಡ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಕಪ್ಪಲುಗುದ್ದಿ ಸಮೀಪ ನಡೆದಿದೆ.
ಬಬಲಾದಿ ಜಾತ್ರೆಯಿಂದ ವಾಪಸ್ ಆಗುತ್ತಿದ್ದಾಗ ಟ್ರ್ಯಾಕ್ಟರ್ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಎಲ್ಲರೂ ರಾಯಬಾಗ ತಾಲೂಕಿನ ಮಂಟೂರ ಗ್ರಾಮದ ನಿವಾಸಿಗಳಾಗಿದ್ದಾರೆ. ಮೃತರ ಗುರುತು ಪತ್ತೆಯಾಗಿಲ್ಲ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.