HomeAgricultureಕಬ್ಬು ಲೋಡ್ ಮಾಡಿದ್ದ ಟ್ರ್ಯಾಕ್ಟರ್ ಹರಿದು ರೈತ ಸ್ಥಳದಲ್ಲೇ ಸಾವು

ಕಬ್ಬು ಲೋಡ್ ಮಾಡಿದ್ದ ಟ್ರ್ಯಾಕ್ಟರ್ ಹರಿದು ರೈತ ಸ್ಥಳದಲ್ಲೇ ಸಾವು

ವಿಜಯಪುರ: ಕಬ್ಬು ಲೋಡ್ ಮಾಡಿದ್ದ ಟ್ರ್ಯಾಕ್ಟರ್ ಟ್ರಾಲಿ ಹರಿದು ರೈತರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದ ಹೊರವಲಯದ ಜಮೀನಿನಲ್ಲಿ ನಡೆದಿದೆ.

ಯಲ್ಲಪ್ಪ ಶಂಕ್ರಪ್ಪ ಗುಳಗೊಂಡ(38) ಮೃತಪಟ್ಟ ಎಂದು ಹೇಳಲಾಗಿದೆ. ಯಲ್ಲಪ್ಪ ಕಬ್ಬು ಕಟಾವು ಮಾಡಿ ಟ್ರ್ಯಾಕ್ಟರ್ ಗೆ ಲೋಡ್ ಮಾಡಿಸಿದ ನಂತರ ಟ್ರ್ಯಾಕ್ಟರ್ ಹಿಂದೆ ಬಿದ್ದಿದ್ದ ಕಬ್ಬು ಆಯ್ದುಕೊಳ್ಳುತ್ತಿದ್ದರು. ಈ ವೇಳೆ ಚಾಲಕ ಏಕಾಏಕಿ ಟ್ರ್ಯಾಕ್ಟರ್ ಅನ್ನು ಹಿಂದೆ ಚಲಾಯಿಸಿದ್ದರಿಂದ ಟ್ರಾಲಿಯಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯ ನಂತರ ಟ್ರ್ಯಾಕ್ಟರ್ ಚಾಲಕ ಪರಾರಿಯಾಗಿದ್ದಾನೆ. ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular