HomeKarnatakaBREAKING: ಕೆರೆಗೆ ಉರುಳಿದ ಗೊಬ್ಬರ ಸಾಗಿಸುತ್ತಿದ್ದ ಟ್ರ್ಯಾಕ್ಟರ್: ಇಬ್ಬರು ಸ್ಥಳದಲ್ಲೇ ಸಾವು

BREAKING: ಕೆರೆಗೆ ಉರುಳಿದ ಗೊಬ್ಬರ ಸಾಗಿಸುತ್ತಿದ್ದ ಟ್ರ್ಯಾಕ್ಟರ್: ಇಬ್ಬರು ಸ್ಥಳದಲ್ಲೇ ಸಾವು

ರಾಯಚೂರು: ಗೊಬ್ಬರ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಕೆರೆಗೆ ಉರುಳಿ ಬಿದ್ದು ಇಬ್ಬರು ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ.

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ನಾಲ್ಕು ಮೈಲ್ ಕ್ಯಾಂಪ್ ಬಳಿ ಈ ಘಟನೆ ನಡೆದಿದೆ. ಜಮೀನಿಗೆ ಗೊಬ್ಬರ ಸಾಗಿಸುತ್ತಿದ್ದ ಟ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಪಲ್ಟಿಯಾಗಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ವಿರೂಪಾಪುರ ಗ್ರಾಮದ ಸುಕುಮುನಿ (31) ಹಾಗೂ ಅರಳಹಳ್ಳಿ ನಿವಾಸಿ ವಿರೂಪನಗೌಡ (42) ಮೃತ ದುರ್ದೈವಿಗಳು. ಘಟನೆ ಬಗ್ಗೆ ಮಾಹಿತಿ ತಿಳಿದು ಸಿಂಧನೂರು ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತದೇಹಗಳನ್ನು ಸಿಂಧನೂರು ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular