HomeKarnatakaಚಲಿಸುತ್ತಿದ್ದ ಟ್ರ್ಯಾಕ್ಟರ್ ನಿಂದ ಬಿದ್ದ ಬಾಲಕ; ಚಕ್ರದಡಿ ಸಿಲುಕಿ ಸ್ಥಳದಲ್ಲೇ ದುರ್ಮರಣ

ಚಲಿಸುತ್ತಿದ್ದ ಟ್ರ್ಯಾಕ್ಟರ್ ನಿಂದ ಬಿದ್ದ ಬಾಲಕ; ಚಕ್ರದಡಿ ಸಿಲುಕಿ ಸ್ಥಳದಲ್ಲೇ ದುರ್ಮರಣ

ಬೆಳಗಾವಿ: ಚಲಿಸುತ್ತಿದ್ದ ಟ್ರ್ಯಾಕ್ಟರ್ ನಿಂದ ಕೆಳಗೆ ಬಿದ್ದ ಬಾಲಕನ ಮೇಲೆಯೇ ಟ್ರ್ಯಾಕ್ಟರ್ ಹರಿದು ಹೋಗಿದ್ದು, ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮಾಸ್ತಮರಡಿ ಗ್ರಾಮದಲ್ಲಿ ನಡೆದಿದೆ.

ಟ್ರ್ಯಾಕ್ಟರ್ ಎಂಜಿನ್ ಗೆ ನೇಗಿಲು ಜೋಡಿಸುಕೊಂಡು ಬರುವಾಗ ಬಾಲಕ ಟ್ರ್ಯಾಕ್ಟರ್ ಎಂಜಿನ್ ಮೇಲೆ ಕುಳಿತು ಪ್ರಯಾಣಿಸುತ್ತಿದ್ದ. ಈ ವೇಳೆ ನಿಯಂತ್ರಣ ತಪ್ಪಿ ಬಾಲಕ ಕೆಳಗೆ ಬಿದ್ದಿದ್ದಾಮ್ನೆ. ಟ್ರ್ಯಾಕ್ಟರ್ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾನೆ.

ಮೃತ ಬಾಲಕನನ್ನು ಮನೋಜ ಬಸವರಾಜ ಮಿಚಿಡೊಳ್ಳಿ (13) ಎಂದು ಗುರುತಿಸಲಾಗಿದೆ. ನೇಸರಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular