ಬೀದರ್: ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ 13 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಮದಗಟ್ಟಿ ಕ್ರಾಸ್ ಬಳಿ ನಡೆದಿದೆ.
ಶೋಹಮ್ (13) ಮೃತ ದುರ್ದೈವಿ. ಬಾಜೋಳಗಾ ಕ್ರಾಸ್ ನಿಂದ ಡೀಸೆಲ್ ತುಂಬಿಸಲು ಹೊರಟಿದ್ದಾಗ ಈ ದುರಂತ ಸಂಭವಿಸಿದೆ. ಬಾಲಕ ಟ್ರ್ಯಾಕ್ಟರ್ ನಲ್ಲಿ ಕುಳಿತಿದ್ದ. ಮದಗಟ್ಟಿ ಕ್ರಾಸ್ ಬಳಿ ಬರುತ್ತಿದಂತೆ ಚಾಲಕನ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ಪಲ್ಟಿಯಾಗಿ ಬಿದ್ದಿದೆ.
ಬಾಲಕ ಗಂಭೀರವಾಗಿ ಗಾಯಗೊಂದಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಖಟಕ್ ಚಿಂಚೋಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

