ರಾಯಚೂರು: ರಸ್ತೆ ಮಧ್ಯೆಯೇ ಟ್ರ್ಯಾಕ್ಟರ್ ಪಲ್ಟಿಯಾಗಿ ಬಿದ್ದ ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಬಿಜನಗೇರಾ ಗ್ರಾಮದಲ್ಲಿ ನಡೆದಿದೆ.
25 ವರ್ಷದ ಈರಣ್ಣ ಗೌಡ ಮೃತ ಯುವಕ. ಜಮೀನಿನಲ್ಲಿ ಮಡಿಕೆ ಹೊಡೆದು ಮನೆಗೆ ಮರಳುತ್ತಿದ್ದ ವೇಳೆ ಕಿರಿದಾದ ರಸ್ತೆಯಿಂದ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಪಲ್ಟಿಯಾಗಿ ಸುಮಾರು 25 ಅಡಿ ಆಳಕ್ಕೆ ಬಿದ್ದಿದೆ.
ಘಟನೆಯಲ್ಲಿ ಟ್ರ್ಯಾಕ್ಟರ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಆತನ ಜೊತೆಗಿದ್ದ ಯುವಕ ಮೃತಪಟ್ಟಿದ್ದಾನೆ. ಯರಗೇರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

