BIG NEWS: ಟ್ರ್ಯಾಕ್ಟರ್-ಕಾರು ಭೀಕರ ಅಪಘಾತ; ಸ್ಥಳದಲ್ಲೇ ಇಬ್ಬರು ದುರ್ಮರಣ

ದಾವಣಗೆರೆ: ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.

ಶಿರಮಗೊಂಡನಹಳ್ಳಿ ಬ್ರಿಡ್ಜ್ ಬಳಿ ಈ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಟ್ರ್ಯಾಕ್ಟರ್ ಗೆ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ.

ಕಾರಿನಲ್ಲಿ ಒಟ್ಟು 7 ಜನರು ಪ್ರಯಾಣಿಸುತ್ತಿದ್ದರು. ಐವರ ಸ್ಥಿತಿ ಗಂಭೀರವಾಗಿದ್ದು, ಎಸ್.ಎಸ್.ಹೈಟೆಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಸ್ಥಳಕ್ಕೆ ವಿದ್ಯಾನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read