HomeKarnatakaBIG NEWS: ಟ್ರ್ಯಾಕ್ಟರ್-ಕೆ ಎಸ್ ಆರ್ ಟಿ ಸಿ ಬಸ್ ನಡುವೆ ಅಪಘಾತ; 20ಕ್ಕೂ ಹೆಚ್ಚು...

BIG NEWS: ಟ್ರ್ಯಾಕ್ಟರ್-ಕೆ ಎಸ್ ಆರ್ ಟಿ ಸಿ ಬಸ್ ನಡುವೆ ಅಪಘಾತ; 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರ ಗಾಯ

ಚಿತ್ರದುರ್ಗ: ಟ್ರ್ಯಾಕ್ಟರ್ ಹಾಗೂ ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.

ಚಿತ್ರದುರ್ಗದ ಚಳ್ಳಕೆರೆ ಬಳಿ ಬಸ್ ಹಾಗೂ ಇಟ್ಟಿಗೆ ತುಂಬಿದ್ದ ಟ್ರ್ಯಾಕ್ಟರ್ ಡಿಕ್ಕಿಯಾಗಿದೆ. ಪರಿಣಾಮ ಬಸ್ ಪಲ್ಟಿಯಾಗಿ ಬಿದ್ದಿದ್ದು, ಬಸ್ ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಚಳ್ಳಕೆರೆ ತಾಲೂಕು ಆಸ್ಪತ್ರೆಗೆ ಸೇರಿಸಲಾಗಿದೆ. ಕುಟುಂಬವೊಂದು ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಸ್ ಬುಕ್ ಮಾಡಿಕೊಂಡು ಹೊರಟಿತ್ತು. ಮದುವೆ ಮುಗಿಸಿ ವಾಪಾಸ್ ಆಗುವಾಗ ಈ ಅಪಘಾತ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular