HomeIndiaBIG NEWS: ಮೇ 20ರಂದು ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ ಕಾರ್ಮಿಕ ಸಂಘಟನೆಗಳು

BIG NEWS: ಮೇ 20ರಂದು ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ ಕಾರ್ಮಿಕ ಸಂಘಟನೆಗಳು

ನವದೆಹಲಿ: ಖಾಸಗೀಕರಣದ ವಿರುದ್ಧ ಧ್ವನಿ ಎತ್ತಿದ ಕಾರ್ಮಿಕ ಸಂಘಟನೆಗಳು ಮೇ 20ರಂದು ಮುಷ್ಕರಕ್ಕೆ ಕರೆ ನೀಡಿವೆ.

ಸರ್ಕಾರಿ ಸಂಸ್ಥೆಗಳ ಖಾಸಗಿಕರಣ ನಿಲ್ಲಿಸಬೇಕು ಎಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮೇ 20ರಂದು ದೇಶವ್ಯಾಪಿ ಮುಷ್ಕರ ನಡೆಸಲು ವಿವಿಧ ಕಾರ್ಮಿಕ ಸಂಘಟನೆಗಳು ಮುಂದಾಗಿವೆ. ಇದಕ್ಕೆ ಪೂರ್ವಭಾವಿಯಾಗಿ ಎರಡು ತಿಂಗಳ ಕಾಲ ಜಾಗೃತಿ ಅಭಿಯಾನ ನಡೆಸಲಾಗುವುದು.

ಕಾರ್ಮಿಕರ ರಾಷ್ಟ್ರೀಯ ಸಮಾವೇಶದಲ್ಲಿ ಈ ಬಗ್ಗೆ ನಿರ್ಣಯ ಅಂಗೀಕರಿಸಲಾಗಿದ್ದು, ಐಟಕ್, ಇಂಟಕ್, HMS, CITU, AIUTUC, LPF, UTUC ಸೇರಿ ಹಲವು ಸಂಘಟನೆಗಳು ಇದಕ್ಕೆ ಬೆಂಬಲ ನೀಡಿವೆ. 26 ಸಾವಿರ ರೂಪಾಯಿ ಮಾಸಿಕ ಕನಿಷ್ಠ ವೇತನ, 9 ಸಾವಿರ ರೂ. ಕನಿಷ್ಠ ಪಿಂಚಣಿ ನಿಗದಿಪಡಿಸಬೇಕು. ಭಾರತೀಯ ಕಾರ್ಮಿಕ ಸಮಾವೇಶವನ್ನು ನಿಗದಿತ ಕಾಲಾವಧಿಯಲ್ಲಿ ನಡೆಸಬೇಕೆಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮುಷ್ಕರಕ್ಕೆ ಕರೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular