HomeKarnatakaಸಂತೆಯಲ್ಲಿ ಸೊಪ್ಪು, ತರಕಾರಿ ಮೇಲೆ ಉಗುಳಿದ ವ್ಯಾಪಾರಿ ಅರೆಸ್ಟ್

ಸಂತೆಯಲ್ಲಿ ಸೊಪ್ಪು, ತರಕಾರಿ ಮೇಲೆ ಉಗುಳಿದ ವ್ಯಾಪಾರಿ ಅರೆಸ್ಟ್

ಕಾರವಾರ: ಭಾನುವಾರದ ಸಂತೆಯಲ್ಲಿ ಸೊಪ್ಪು, ತರಕಾರಿ ಮಾರಾಟದ ವೇಳೆ ಎಂಜಲು ಉಗುಳಿ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ವ್ಯಾಪಾರಿಯನ್ನು ಪೊಲೀಸರು ಬಂಧಿಸಿದ್ದಾರೆ.

ಹಾವೇರಿ ಜಿಲ್ಲೆ ಹಾನಗಲ್ ತಾಲೂಕು ಕೆಳಗಿನ ನೆಗಳೂರಿನ ಅಬ್ದುಲ್ ಹಸನ್ ಸಾಬ್(50) ಬಂಧಿತ ಆರೋಪಿ. ಕಾರವಾರ ನಗರದ ರಸ್ತೆಯಲ್ಲಿ ತರಕಾರಿ ಮಾರಾಟಕ್ಕೆ ಇಟ್ಟುಕೊಂಡಿದ್ದ ಅಬ್ದುಲ್ ಹಸನ್ ಸಾಬ್ ತರಕಾರಿಗಳಿಗೆ ನೀರು ಚಿಮುಕಿಸುವ ವೇಳೆ ಎಂಜಲು ಉಗುಳುತ್ತಿದ್ದ. ಇದನ್ನು ಕಂಡ ಗ್ರಾಹಕರು ಮೊಬೈಲ್ ನಲ್ಲಿ ದೃಶ್ಯ ಚಿತ್ರೀಕರಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.

ಹಿಂದೂ ಸಂಘಟನೆಗಳು ಪ್ರಮುಖರು ಸ್ಥಳಕ್ಕೆ ತೆರಳಿ ವ್ಯಾಪಾರಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮುರಳಿ ಗೋವೇಕರ ಎಂಬುವರು ದೂರು ನೀಡಿದ್ದು, ಕಾರವಾರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಧಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular