HomeKarnatakaನಗರದ ಪ್ರಮುಖ ರಸ್ತೆಯ ಹೆದ್ದಾರಿಗಳಲ್ಲಿ ಸಂಚಾರದಟ್ಟಣೆ

ನಗರದ ಪ್ರಮುಖ ರಸ್ತೆಯ ಹೆದ್ದಾರಿಗಳಲ್ಲಿ ಸಂಚಾರದಟ್ಟಣೆ

ಬೆಂಗಳೂರು- ವಾರಾಂತ್ಯಹಾಗೂ ದೀಪಾವಳಿ ಹಬ್ಬದ ಸಾಲುಸಾಲು ರಜೆಯ ಹಿನ್ನೆಲೆಯಲ್ಲಿ ಜನರು ತಮ್ಮತಮ್ಮ ಊರು ಮತ್ತು ಪ್ರವಾಸಿತಾಣಗಳತ್ತ ಪ್ರಯಾಣ ಬೆಳೆಸುತ್ತಿದ್ದು, ನಗರದ ಪ್ರಮುಖ ರಸ್ತೆಯ ಹೆದ್ದಾರಿಗಳಲ್ಲಿ ಸಂಚಾರದಟ್ಟಣೆ ಉಂಟಾಗಿದೆ.

ಕಳೆದ ರಾತ್ರಿಯಿಂದಲೇ ಜನರು ಊರುಗಳತ್ತ ತೆರಳುತ್ತಿದ್ದು, ಕೆಂಪೇಗೌಡ ಬಸ್ ನಿಲ್ದಾಣ, ಸಿಟಿ ರೈಲ್ವೆ ನಿಲ್ದಾಣ, ಯಶವಂತಪುರ ನಿಲ್ದಾಣಗಳು ಪ್ರಯಾಣಿಕರಿಂದ ತುಂಬಿ ತುಳುಕುತ್ತಿದೆ.

ಮೆಜೆಸ್ಟಿಕ್, ತುಮಕೂರು ರಸ್ತೆಯ ಯಶವಂತಪುರ, ಗೊರಗುಂಟೆಪಾಳ್ಯ, ಜಾಲಹಳ್ಳಿ ಕ್ರಾಸ್, ಮೈಸೂರು ರಸ್ತೆ, ಕೆಂಗೇರಿ, ಹೊಸೂರು ಮುಖ್ಯರಸ್ತೆ, ಹೆಬ್ಬಾಳ, ಬಳ್ಳಾರಿ ರಸ್ತೆ, ಕನಕಪುರ ರಸ್ತೆ ಸೇರಿದಂತೆ ಮತ್ತಿತರ ಪ್ರಮುಖ ರಸ್ತೆಗಳಲ್ಲಿ ವಾಹನಗಳ ಸಂಚಾರ ದಟ್ಟಣೆ ಹೆಚ್ಚಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಾರಾಂತ್ಯದ ರಜೆ ಸೇರಿ ಬರೋಬ್ಬರಿ ನಾಲ್ಕು ದಿನ ಸಾಲುಸಾಲು ರಜೆ ಸಿಕ್ಕ ಹಿನ್ನಲೆಯಲ್ಲಿ ನಗರದಲ್ಲಿ ನೆಲೆಸಿರುವ ಬಹುತೇಕ ಜನರು ತಮ್ಮತಮ್ಮ ಊರು, ಪ್ರವಾಸಿತಾಣ, ದೇವಾಲಯಗಳತ್ತ ಮುಖ ಮಾಡಿದ್ದರಿಂದ ಸಂಚಾರದಟ್ಟಣೆಯಲ್ಲಿ ಸಿಲುಕಿಕೊಂಡು ಗಂಟೆಗಟ್ಟಲೆ ಕಾಯುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಹಬ್ಬದ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ವತಿಯಿಂದ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಕಲ್ಪಿಸಲಾಗಿದ್ದು, ಎಲ್ಲಾ ಬಸ್‌ಗಳು ಪ್ರಯಾಣಿಕರಿಂದ ತುಂಬಿ ತುಳುಕುತ್ತಿದ್ದವು. ಜೊತೆಗೆ ರೈಲುಗಳು, ಖಾಸಗಿ ಬಸ್‌ಗಳಲ್ಲೂ ಸಹ ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular