HomeKarnatakaTraffic fine : `ಸಂಚಾರ ನಿಯಮ' ಉಲ್ಲಂಘಿಸಿದ ವಾಹನ ಸವಾರರಿಗೆ ಮಹತ್ವದ ಮಾಹಿತಿ

Traffic fine : `ಸಂಚಾರ ನಿಯಮ’ ಉಲ್ಲಂಘಿಸಿದ ವಾಹನ ಸವಾರರಿಗೆ ಮಹತ್ವದ ಮಾಹಿತಿ

ಬೆಂಗಳೂರು : ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರಿಗೆ ಸಂಚಾರಿ ಪೊಲೀಸ್ ಇಲಾಖೆ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ವಾಹನ ಸವಾರರು ಸಂಚಾರ ನಿಯಮ ಉಲ್ಲಂಘನೆಗೆ ದಂಡ ಕಟ್ಟಲು ಮತ್ತೆ ಶೇ.50 ರಿಯಾಯಿತಿ ನೀಡಲಾಗಿದೆ.

ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು. ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಿದೆ. ಸಂಚಾರಿ ಪೊಲೀಸ್ ಇಲಾಖೆಯ ಇ-ಚಲನ್ನಲ್ಲಿ ಫೆಬ್ರವರಿ 11, 2023ರ ಒಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಈ ಅವಕಾಶ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಿಯಾಯಿತಿ ದರದಲ್ಲಿ ದಂಡ ಪಾವತಿಸುವುದು ಹೇಗೆ..? ಇಲ್ಲಿದೆ ಮಾಹಿತಿ
1) ಕರ್ನಾಟಕ ರಾಜ್ಯ ಪೊಲೀಸ್ ಅಧಿಕೃತ ಮೊಬೈಲ್ ಅಪ್ಲಿಕೇಶನ್ ಮೂಲಕ ಪಾವತಿ ಮಾಡಬಹುದು.
2) ಪೇಟಿಎಂ ಅಪ್ಲಿಕೇಶನ್ ಮುಖಾಂತರವು ಉಲ್ಲಂಘನೆಯ ವಿವರಗಳನ್ನು ಪಡೆದು ಪಾವತಿಸಬಹುದಾಗಿದೆ.
3) ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ವೆಬ್ ಸೈಟ್ ಗೆ ಲಾಗ್ ಇನ್ ಆಗಿ ವಾಹನದ ನೋಂದಣಿ ಸಂಖ್ಯೆ ನಮೂದಿಸುವ ಮೂಲಕ ಬಾಕಿ ಪಾವತಿ ಮಾಡಬಹುದು.
4) ಸಂಚಾರ ನಿರ್ವಹಣ ಕೇಂದ್ರದ ಮೊದಲನೆ ಮಹಡಿಯಲ್ಲೂ ಸಹ ದಂಡ ಪಾವತಿಸಬಹುದಾಗಿದೆ.
5 ) ಹತ್ತಿರ ಸಂಚಾರ ಪೊಲೀಸ್ ಠಾಣೆಗಳಲ್ಲಿ ನಿಮ್ಮ ವಾಹನದ ನೋಂದಣಿ ಸಂಖ್ಯೆಯ ವಿವರಗಳನ್ನು ಒದಗಿಸಿ ಪಡೆಯಬಹುದು. ದಂಡವನ್ನು ಮೊತ್ತವನ್ನು ಪಾವತಿಸಿ ರಶೀದಿ ಪಡೆಯಬಹುದು.. ಹೆಚ್ಚಿನ ಮಾಹಿತಿಗಾಗಿ 080-22942883 ಅಥವಾ 080-22943381 ಅನ್ನು ಸಂಪರ್ಕಿಸಬಹುದು.

ದಿನಾಂಕ:14.06.2023 ರಂದು ನಡೆದ ಸಭೆಯ ನಿರ್ಣಯದಂತೆ, ದಿನಾಂಕ:11.02.2023ರೊಳಗಿನ ಪ್ರಕರಣಗಳಿಗೆ ಮಾತ್ರ ಅನ್ವಯಿಸುವಂತೆ ಪೊಲೀಸ್ ಇಲಾಖೆಯ ಸಂಚಾರಿ ಇಚಲನ್ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50ರಮ್ಮ ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ದಿನಾಂಕ:08.07.2023ರವರೆಗೆ ಕಾಲಾವಕಾಶ ನೀಡಿ ಆದೇಶ ಹೂರಡಿಸುವಂತೆ ಕೋರಿರುತ್ತಾರೆ. ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ ಸರ್ಕಾರವು ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ- ಚಲನ್ನಲ್ಲಿ ದಿನಾಂಕ:11.02.2023 ಲೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಿದೆ.ಈ ರಿಯಾಯಿತಿಯು ದಿನಾಂಕ:09.09.2023ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಇತ್ತೀಚೆಗೆ ಆದೇಶ ಹೊರಡಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular