HomeLatest NewsBREAKING : ಗಣರಾಜ್ಯೋತ್ಸವದ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಇಂದು ವಾಹನ ಸಂಚಾರ ನಿರ್ಬಂಧ.!

BREAKING : ಗಣರಾಜ್ಯೋತ್ಸವದ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಇಂದು ವಾಹನ ಸಂಚಾರ ನಿರ್ಬಂಧ.!

ಬೆಂಗಳೂರು :  ಗಣರಾಜ್ಯೋತ್ಸವದ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಇಂದು ವಾಹನ ಸಂಚಾರ ನಿರ್ಬಂಧಿಸಲಾಗಿದ್ದು, ಈ ಕುರಿತು ಬೆಂಗಳೂರಿನ ಸಂಚಾರಿ ಪೊಲೀಸರು ಪ್ರಕಟಣೆ ಹೊರಡಿಸಿದ್ದಾರೆ.

ದಿನಾಂಕ: 26/01/2026 ರಂದು ಬೆಳಗ್ಗೆ 09-00 ಗಂಟೆಗೆ ಕಬ್ಬನ್ ರಸ್ತೆಯಲ್ಲಿರುವ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನದಲ್ಲಿ ಗಣರಾಜ್ಯೋತ್ಸವ ದಿನಾಚರಣೆ – 2026 ರ ಅಂಗವಾಗಿ ವಿಶೇಷ ಕವಾಯತು ನಡೆಯಲಿದ್ದು, ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರು ಧ್ವಜಾರೋಹಣ ಮಾಡಿ ಗೌರವ ವಂದನೆ ಸ್ವೀಕರಿಸಲಿದ್ದಾರೆ.

ಇದರ ಅಂಗವಾಗಿ ಬೆಂಗಳೂರು ನಗರ ಸಂಚಾರ ಪೊಲೀಸರು ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನದ ಒಳಗಡೆ ಮತ್ತು ಸುತ್ತ-ಮುತ್ತಲು ಈ ಕೆಳಕಂಡಂತೆ ಸಂಚಾರ ಬಂದೋಬಸ್ತ್ ವ್ಯವಸ್ಥೆಯನ್ನು ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

1. ಕಾರ್ ಪಾಸ್‌ಗಳನ್ನು ಹೊಂದಿರುವ ಎಲ್ಲಾ ಆಹ್ವಾನಿತರು ಅವರುಗಳ ಪಾಸ್‌ಗಳಲ್ಲಿ ನಿಗಧಿಪಡಿಸಿದ ಗೇಟ್‌ಗಳಲ್ಲಿ ಇಳಿದುಕೊಳ್ಳುವುದು ಹಾಗೂ ಪಾಸ್‌ನಲ್ಲಿ ನಿಗಧಿಪಡಿಸಿರುವ ಸ್ಥಳಗಳಲ್ಲಿ ವಾಹನಗಳನ್ನು ನಿಲುಗಡೆಮಾಡುವಂತೆ ಕೋರಲಾಗಿದೆ.

2. ತುರ್ತು ಸೇವಾ ವಾಹನಗಳಾದ ಅಂಬುಲೆನ್ಸ್, ಅಗ್ನಿಶಾಮಕ ದಳದ ವಾಹನಗಳು, ನೀರಿನ ಟ್ಯಾಂಕರ್. ಕೆ.ಎಸ್.ಆರ್.ಪಿ., ಕ್ಯೂ.ಆರ್.ಟಿ, ಬಿ.ಬಿ.ಎಂ.ಪಿ. ಹಾಗೂ ಪಿ.ಡಬ್ಲ್ಯೂಡಿ ವಾಹನಗಳು ಪ್ರವೇಶ ದ್ವಾರ-2 ರ ಮುಖಾಂತರ ಪರೇಡ್ ಮೈದಾನದ ಒಳಗೆ ಪ್ರವೇಶಿಸಿ ನಂತರ ಪೋರ್ಟ್ ವಾಲ್ ಹಿಂಭಾಗದಲ್ಲಿ (ದಕ್ಷಿಣದ ಕಡೆಗೆ) ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.

3. ಕಾರ್ಯಕ್ರಮಕ್ಕೆ ಬರುವ ಎಲ್ಲಾ ಮಾಧ್ಯಮದವರ ವಾಹನಗಳು ಪ್ರವೇಶ ದ್ವಾರ-4 ರ ಮೂಲಕ ಒಳ ಪ್ರವೇಶಿಸಿ. ಮೈದಾನದ ಪೂರ್ವ ಭಾಗದಲ್ಲಿ ನಿಗಧಿತ ಸ್ಥಳದಲ್ಲಿ ವಾಹನ ನಿಲುಗಡೆ ಮಾಡಬಹುದಾಗಿದೆ.

4. ದಿನಾಂಕ:26/01/2026 ರಂದು ಬೆಳಗ್ಗೆ 08-30 ಗಂಟೆಯಿಂದ ಬೆಳಗ್ಗೆ 10-30 ರ ವರೆಗೆ ಕಬ್ಬನ್‌ ರಸ್ತೆಯಲ್ಲಿ ಬಿ.ಆ‌ರ್.ವಿ ಜಂಕ್ಷನ್ ನಿಂದ ಕಾಮರಾಜರಸ್ತೆ ಜಂಕ್ಷನ್‌‌ ವರೆಗೆ ಎರಡೂ ದಿಕ್ಕುಗಳಲ್ಲಿನ ಸಂಚಾರವನ್ನು ನಿರ್ಬಂಧಿಸಿ ಈ ಕೆಳಕಂಡಂತೆ ಪರ್ಯಾಯ ಮಾರ್ಗದಲ್ಲಿ ಸಂಚರಿಸುವ ವ್ಯವಸ್ಥೆ ಮಾಡಲಾಗಿದೆ.

> ಇನ್‌ಫೆಂಟ್ರಿ ರಸ್ತೆಯಲ್ಲಿ ಮಣಿಪಾಲ್ ಸೆಂಟರ್‌ಕಡೆಗೆ ಸಂಚರಿಸುವ ವಾಹನಗಳು ನೇರವಾಗಿ ಇನ್‌ಫೆಂಟ್ರಿರಸ್ತೆ ಸಫೀನಾ ಪ್ರಾಜಾ ಎಡತಿರುವು ಪಡೆದು ಮೈನ್‌ಗಾರ್ಡ್‌ ರಸ್ತೆ- ಆಲೀಸ್ ಸರ್ಕಲ್- ಡಿಸ್ಪೆನ್ಸರಿ ರಸ್ತೆ-ಕಾಮರಾಜರಸ್ತೆ ಮತ್ತು ಡಿಕನ್ಸನ್‌ರಸ್ತೆ ಜಂಕ್ಷನ್‌ – ಬಲಕ್ಕೆ ತಿರುವು ಪಡೆದು ಕಾಮರಾಜ ರಸ್ತೆ- ಕಬ್ಬನ್‌ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್‌ನಲ್ಲಿ ಎಡಕ್ಕೆ ತಿರುವು ಪಡೆದು, ಕಬ್ಬನ್ ರಸ್ತೆ ಮುಖಾಂತರ ಮಣಿಪಾಲ್ ಸೆಂಟರ್‌ಕಡೆಗೆ ಸಾಗಬಹುದಾಗಿದೆ.

> ಕಬ್ಬನ್‌ ರಸ್ತೆಯಲ್ಲಿ, ಮಣಿಪಾಲ್ ಸೆಂಟರ್ ಜಂಕ್ಷನ್‌ನಿಂದ ಬಿ.ಆರ್.ವಿ. ಜಂಕ್ಷನ್ ಕಡೆಗೆ ಬರುವ ವಾಹನಗಳ ಸಂಚಾರವನ್ನು ಮಣಿಪಾಲ್ ಸೆಂಟರ್ ಬಳಿ ನಿರ್ಬಂಧಿಸಿದ್ದು, ಸದರಿ ವಾಹನಗಳು ವೆಬ್ ಜಂಕನ್ಸ್ ಬಳಿ

ಬಲ ತಿರುವು ಪಡೆದು ಎಂ.ಜಿ. ರಸ್ತೆಯ ಮೂಲಕ ಮೆಯೋ ಹಾಲ್, ಕಾವೇರಿ ಎಂಪೋರಿಯಂ, ಅನಿಲ್‌ಕುಂಬ್ಳೆ ವೃತ್ತದಲ್ಲಿ ಬಲ ತಿರುವು ಪಡೆದು ಮುಂದೆ ಸಾಗಬಹುದು.

> ಅನಿಲ್‌ಕುಂಬ್ಳೆ ವೃತ್ತದಿಂದ ಕಬ್ಬನ್‌ರಸ್ತೆ ಕಡೆಗೆ ಬರುವ ವಾಹನಗಳು ನೇರವಾಗಿ ಸೆಂಟ್ರಲ್ ಸ್ಪೀಟ್‌ನಲ್ಲಿ ಸಾಗಿ, ಬಲಕ್ಕೆ ತಿರುವು ಪಡೆದು-ಇನ್ ಫೆಂಟ್ರಿರಸ್ತೆ- ಸಫೀನಾ ಪ್ಲಾಜಾ-ಎಡಕ್ಕೆತಿರುವು ಪಡೆದು ಮೈನ್‌ಗಾರ್ಡ್‌ ರಸ್ತೆ-ಆಲಿ ಸರ್ಕಲ್- ಡಿಸ್ಪೆನ್ಸರಿರಸ್ತೆ ಕಾಮರಾಜರಸ್ತೆ ಮತ್ತು ಡಿಕನ್ಸನ್‌ರಸ್ತೆ ಜಂಕ್ಷನ್-ಬಲಕ್ಕೆ ತಿರುವು ಪಡೆದು ಕಾಮರಾಜ ರಸ್ತೆ- ಕಬ್ಬನ್‌ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್ ನಲ್ಲಿ ಎಡಕ್ಕೆ ತಿರುವು ಪಡೆದು, ಕಬ್ಬನ್‌ರಸ್ತೆ ಮುಖಾಂತರ ಮಣಿಪಾಲ್ ಸೆಂಟರ್‌ ಕಡೆಗೆ ಸಾಗಬಹುದಾಗಿದೆ.

5. ಭದ್ರತಾ ದೃಷ್ಟಿಯಿಂದ ಪೆರೇಡ್‌ಗೆ ಬರುವ ಎಲ್ಲಾ ಆಹ್ವಾನಿತರು ಹಾಗೂ ಸಾರ್ವಜನಿಕರು ಮೊಬೈಲ್ ಫೋನ್, ಹೆಲ್ಕೆಟ್, ಕ್ಯಾಮೆರಾ, ರೇಡಿಯೋ, ಕೊಡೆ ಮುಂತಾದ ವಸ್ತುಗಳನ್ನು ಜೊತೆಯಲ್ಲಿ ತೆಗೆದುಕೊಂಡು ಹೋಗದಂತೆಕೋರಲಾಗಿದೆ. ಇಂತಹ ವಸ್ತುಗಳನ್ನು ಹೊಂದಿರುವವರನ್ನು ಒಳಗೆ ಬಿಡಲಾಗುವುದಿಲ್ಲ. ಎಲ್ಲರೂ ಬೆಳಗ್ಗೆ 08-00 ಗಂಟೆಯ ಒಳಗೆ ಮೈದಾನದಲ್ಲಿ ಆಸೀನರಾಗುವಂತೆ ಕೋರಲಾಗಿದೆ.

ವಾಹನ ನಿಲುಗಡೆ ನಿಷಿದ್ದ ರಸ್ತೆಗಳು:

> ಸೆಂಟ್ರಲ್ ಸ್ಟ್ರೀಟ್, ಅನಿಲ್ ಕುಂಬ್ಳೆ ವೃತ್ತದಿಂದ ಶಿವಾಜಿನಗರ ಬಸ್ ನಿಲ್ದಾಣದವರೆಗೆ.

> ಕಬ್ಬನ್ ರಸ್ತೆ, ಸಿ.ಟಿ.ಓ. ವತ್ತ ದಿಂದಕೆ.ಆರ್.ರಸ್ತೆ& ಕಬ್ಬನ್‌ರಸ್ತೆ ಜಂಕ್ಷನ್‌ ವರೆಗೆ.

> ಎಂ.ಜಿ.ರಸ್ತೆ, ಅನಿಲ್ ಕುಂಬ್ಳೆವೃತ್ತದಿಂದಕೀನ್ಸ್‌ ವೃತ್ತದವರೆಗೆ.

ವಿಶೇಷ ಸೂಚನೆಗಳು :

1. ಮಾಣಿಕ್‌ ಷಾ ಪೆರೇಡ್‌ಮೈದಾನ ಹಾಗೂ ಸುತ್ತಮುತ್ತ ವಾಹನಗಳ ನಿಲುಗಡೆಗೆ ಸ್ಥಳಾವಕಾಶ ಕೊರತೆ ಇರುವುದರಿಂದ ಹಾಗೂ ಸಂಚಾರ ದಟ್ಟಣೆಯನ್ನ ಕಡಿಮೆ ಮಾಡಲು ಸಾರ್ವಜನಿಕರು, ಸಾರ್ವಜನಿಕ ಸಾರಿಗೆ ವ್ಯವಸ್ಥೆ ಮತ್ತು ಮೆಟ್ರೋ ಸೇವೆಯನ್ನು ಬಳಸಲು ಕೋರಲಾಗಿದೆ.

2. ಯಾವುದೇ ಸಹಾಯಕ್ಕಾಗಿ ಪೊಲೀಸರು ಸದಾ ನಿಮ್ಮೊಂದಿಗಿರುತ್ತಾರೆ. ದಯವಿಟ್ಟು ಸ್ಥಳದಲ್ಲಿರುವ ಪೊಲೀಸರನ್ನು ಸಂಪರ್ಕಿಸಿ ಅಥವಾ ಪೊಲೀಸ್ ಸಹಾಯವಾಣಿ ಸಂಖ್ಯೆ 112 ಗೆ ಕರೆ ಮಾಡಬಹುದಾಗಿದೆ.

3. ಗಣರಾಜ್ಯೋತ್ಸವ ದಿನಾಚರಣೆ ಸಂಭ್ರಮಾಚರಣೆಯನ್ನು ಯಶಸ್ವಿಗೊಳಿಸಲು ತಮ್ಮ ಸಹಕಾರವನ್ನು ಬಯಸುತ್ತೇವೆ.

4. ಕುಡಿಯುವ ನೀರಿನ ವ್ಯವಸ್ಥೆ ಮತ್ತು ಶೌಚಾಲಯಗಳನ್ನು ಜಿ.ಬಿ.ಎ ವತಿಯಿಂದ ಏರ್ಪಡಿಸಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳಲು ಸಾರ್ವಜನಿಕರಲ್ಲಿ ಕೋರಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular