HomeKarnatakaBIG NEWS : ಮಂಗಳೂರಿನ ಈ ಮಾರ್ಗದಲ್ಲಿ ಏ.30 ರವರೆಗೆ ಸಂಚಾರ ನಿರ್ಬಂಧ, ಇಲ್ಲಿದೆ ಪರ್ಯಾಯ...

BIG NEWS : ಮಂಗಳೂರಿನ ಈ ಮಾರ್ಗದಲ್ಲಿ ಏ.30 ರವರೆಗೆ ಸಂಚಾರ ನಿರ್ಬಂಧ, ಇಲ್ಲಿದೆ ಪರ್ಯಾಯ ಮಾರ್ಗ.!

ಮಂಗಳೂರು : ಮಂಗಳೂರು ನಗರದಿಂದ ಕೇರಳ ರಾಜ್ಯಕ್ಕೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 66 ರ ಹಳೆಯ ನೇತ್ರಾವತಿ ಸೇತುವೆಯಲ್ಲಿ (ತಲಪಾಡಿ ಮಂಗಳೂರು ನಗರಕ್ಕೆ ಬರುವ) ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ದಿನಾಂಕ:01-04-2025 ರಿಂದ 30-04-2025 ರವರೆಗೆ 30 ದಿನಗಳು ಪ್ರಮುಖ ದುರಸ್ತಿ ಕಾಮಗಾರಿಯನ್ನು ನಡೆಯಲಿದೆ.

ಈಗಾಗಿ ಒಂದು ಸೇತುವೆಯಲ್ಲಿ (ಮಂಗಳೂರು ನಗರದಿಂದ ತಲಪಾಡಿ ಕಡೆಗೆ ಹೋಗುವ) ವಾಹನಗಳ ಸಂಚಾರಕ್ಕಾಗಿ ದ್ವಿಮುಖ ಸಂಚಾರ ವ್ಯವಸ್ಥೆ ಮಾಡಲಾಗಿರುತ್ತದೆ. ಇದರಿಂದ ಪಂಪುವೆಲ್ನಿಂದ ತೊಕ್ಕೊಟ್ಟು ವರೆಗೆ ಸದ್ರಿ ಹೆದ್ದಾರಿಯ ರಸ್ತೆಯಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿರುತ್ತದೆ.

ಆದ್ದರಿಂದ ಹಳೆಯ ನೇತ್ರಾವತಿ ಸೇತುವೆಯಲ್ಲಿ ದುರಸ್ತಿ ಕಾಮಗಾರಿ ನಡೆಯುವ ದಿನಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗುವ ಸಾದ್ಯತೆಗಳಿದ್ದು, ನೇತ್ರಾವತಿ ಸೇತುವೆಯ ಮೂಲಕ ಸಂಚರಿಸುವ ಎಲ್ಲಾ ವಾಹನಗಳ ಚಾಲಕರು/ ಸವಾರರು ಮತ್ತು ಸಾರ್ವಜನಿಕರು ಎಚ್ಚರಿಕೆಯಿಂದ ಚಲಿಸಬೇಕು ಹಾಗೂ ಪೀಕ್ ಅವರ್ಗಳಲ್ಲಿ ಸದರಿ ಮಾರ್ಗದಲ್ಲಿ ವಾಹನ ಸಂಚಾರವನ್ನು ತಪ್ಪಿಸಲು (avoid ಮಾಡಲು) ಕೋರಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾರ್ವಜನಿಕರಿಗೆ ಉಪಯೋಗಿಸಬಹುದಾದ ಇತರೆ ಮಾರ್ಗಗಳು
• ಮುಡಿಪು-ಕೊಣಾಜೆ-ದೇರಳಕಟ್ಟೆ ಕಡೆಯಿಂದ ಮಂಗಳೂರು ನಗರ ಕಡೆಗೆ ಲಘು ವಾಹನಗಳು/ದ್ವಿ-ಚಕ್ರ ವಾಹನಗಳು ಸಂಚರಿಸುವ ಸ್ಥಳೀಯ ವಾಸಿಗಳು ಹರೇಕಳ(ಬ್ರಿಡ್ಜ್) ಅಡ್ಯಾರ್ ಮುಖಾಂತರ ಮಂಗಳೂರು ಕಡೆಗೆ ಸಂಚರಿಸಬಹುದಾಗಿದೆ. ಕೊಣಾಜೆ-
• ಮಂಗಳೂರು ಕಡೆಯಿಂದ ಕೊಣಾಜೆ-ಮುಡಿಪು-ದೇರಳಕಟ್ಟೆ ಕಡೆಗೆ ಸಂಚರಿಸುವ ಸ್ಥಳೀಯ ದ್ವಿ-ಚಕ್ರ / ಲಘು ವಾಹನಗಳು ಅಡ್ಯಾರ್-ಹರೇಕಳ(ಬ್ರಿಡ್) ಮುಖಾಂತರ ಸಂಚರಿಸುವುದು.
• ថ. ಉಳ್ಳಾಲ ಕಡೆಯಿಂದ ಬೆಂಗಳೂರು-ಉಪ್ಪಿನಂಗಡಿ-ಪುತ್ತೂರು-ಸುಳ್ಯ ಕಡೆಗೆ ಸಂಚರಿಸುವ ವಾಹನಗಳು ತೊಕ್ಕೊಟ್ಟಿನಿಂದ ಬಲಕ್ಕೆ ತಿರುಗಿ ಮುಡಿಪು-ಬೋಳಿಯಾರ್-ಮೆಲ್ಕಾರ್ ಮೂಲಕ ಸಂಚರಿಸುವುದು
•
ಬಿ.ಸಿ ರೋಡ್ ಕಡೆಯಿಂದ ತಲಪಾಡಿ ಮತ್ತು ಕೇರಳ ಕಡೆಗೆ ಸಂಚರಿಸುವ ವಾಹನಗಳು ಮೆಲ್ಕಾರ್-ಮುಡಿಪು-ತೊಕ್ಕೊಟ್ಟು ಮುಖಾಂತರ ಸಂಚರಿಸುವುದು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular