HomeLatest Newsಈ ವರ್ಷದಿಂದಲೇ ಶಾಲಾ ಮಕ್ಕಳಿಗೆ ಸಂಚಾರ ನಿಯಮ, ರಸ್ತೆ ಸುರಕ್ಷತೆ ಪಠ್ಯ ಅಳವಡಿಕೆ

ಈ ವರ್ಷದಿಂದಲೇ ಶಾಲಾ ಮಕ್ಕಳಿಗೆ ಸಂಚಾರ ನಿಯಮ, ರಸ್ತೆ ಸುರಕ್ಷತೆ ಪಠ್ಯ ಅಳವಡಿಕೆ

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದ ಪಠ್ಯದಲ್ಲಿ ಸಂಚಾರ, ವೈಯಕ್ತಿಕ ಸುರಕ್ಷತೆ, ರಸ್ತೆ ಸುರಕ್ಷತೆ, ಟ್ರಾಫಿಕ್ ಲೈಟ್ ವಿಚಾರ ಕುರಿತ ಪಠ್ಯ ಅಳವಡಿಸಲಾಗಿದೆ ಎಂದು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ತಿಳಿಸಿದೆ.

ಇಲಾಖೆಯ ನಿರ್ದೇಶಕರು ಈ ಕುರಿತಾಗಿ ಆದೇಶ ಹೊರಡಿಸಿದ್ದು, ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಶಾಲೆಗಳಿಗೆ ಅನ್ವಯವಾಗುವಂತೆ ಎರಡನೇ ತರಗತಿ, 4, 6, 7 ಮತ್ತು 9ನೇ ತರಗತಿಯ ಮಕ್ಕಳಿಗೆ ಸಂಚಾರ ಸುರಕ್ಷತೆ ಕುರಿತು ಪಠ್ಯ ಅಳವಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ,

ಎರಡನೇ ತರಗತಿ ಮಕ್ಕಳಿಗೆ ಹಿಂದಿ ಪ್ರಥಮ ಭಾಷೆ ವಿಷಯದಲ್ಲಿ ಟ್ರಾಫಿಕ್ ಲೈಟ್ಸ್ ಬಗ್ಗೆ ತಿಳಿಸಲಾಗಿದೆ. ನಾಲ್ಕನೇ ತರಗತಿಯ ದ್ವಿತೀಯ ಭಾಷೆ ಆಂಗ್ಲ ವಿಷಯದಲ್ಲಿ ಟ್ರಾವೆಲ್, ಆಂಗ್ಲ ಪರಿಸರ ಅಧ್ಯಯನದಲ್ಲಿ ಟ್ರಾಫಿಕ್ ರೂಲ್ಸ್ ಪಠ್ಯ ಅಳವಡಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

6ನೇ ತರಗತಿಯ ದೈಹಿಕ ಶಿಕ್ಷಣದಲ್ಲಿ ವೈಯಕ್ತಿಕ ಸುರಕ್ಷತೆ, 7ನೇ ತರಗತಿಯ ಆಂಗ್ಲ ದ್ವಿತೀಯ ಭಾಷೆ ವಿಷಯದಲ್ಲಿ ರೋಡ್ ಸೇಫ್ಟಿ, 9ನೇ ತರಗತಿಯ ತೃತೀಯ ಭಾಷೆ ಹಿಂದಿಯಲ್ಲಿ ಸಡಕ್ ಕಿ ರಕ್ಷಾ ಸಬ್ ಕೀ ಸುರಕ್ಷಾ ಪಠ್ಯ ಅಳವಡಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular