BIG NEWS: ಟ್ರಾಫಿಕ್ ರೂಲ್ಸ್ ಪಾಲಿಸದಿದ್ದರೆ ಲೈಸನ್ಸ್ ರದ್ದುಗೊಳಿಸಿ: ಸಿಎಂ ಸೂಚನೆ

ಬೆಂಗಳೂರು: 65 ಆಧುನಿಕ‌ ಜೀವ ರಕ್ಷಕ ಸವಲತ್ತುಗಳಿರುವ ಆ್ಯಂಬುಲೆನ್ಸ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದ್ದಾರೆ.

ವಿಧಾನಸೌಧ ಮುಂಭಾಗದ ಮೆಟ್ಟಿಲುಗಳ ಮೇಲೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಆಪತ್ಕಾಲಯಾನ ಸೇವೆ: ನೂತನ 65 ಆ್ಯಂಬುಲನ್ಸ್ ಗಳನ್ಮು ಲೋಕಾರ್ಪಣೆ ಮಾಡಲಾಯಿಉ.

ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಪಘಾತದ ಸಂದರ್ಭದಲ್ಲಿ ಗೋಲ್ಡರ್ ಹವರ್ ಬಹಳ ಮುಖ್ಯ. ಈ‌ ಒಂದು ಗಂಟೆಯಲ್ಲಿ ಅಗತ್ಯ ತುರ್ತು ಚಿಕಿತ್ಸೆ ಸಿಕ್ಕರೆ ನೂರಾರು ಪ್ರಾಣಗಳನ್ನು ಉಳಿಸಲು ಸಾಧ್ಯವಿದೆ. ಹೀಗೆ ಪ್ರಾಣ ಉಳಿಸುವ ಕಾರ್ಯಕ್ಕೆ ಈ ಆ್ಯಂಬುಲೆನ್ಸ್ ಗಳು ನೆರವಾಗುತ್ತವೆ ಎಂದು ತಿಳಿಸಿದರು.

ಸದ್ಯ 65 ಆಧುನಿಕ ಮತ್ತು ಪ್ರಾಥಮಿಕ ಆ್ಯಂಬುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಲಾಗಿದೆ. ಮುಂದಿನ‌ ದಿನಗಳಲ್ಲಿ ಇಡೀ ರಾಜ್ಯಕ್ಕೆ ಈ ಆ್ಯಂಬುಲೆನ್ಸ್ ಗಳನ್ನು ವಿಸ್ತರಿಸಲಾಗುವುದು ಎಂದರು.

ಇದೇ ವೇಳೆ ಸಂಚಾರಿ ನಿಯಮಗಳನ್ನು ಶಿಸ್ತಿನಿಂದ ಪಾಲಿಸಿದರೆ ಬಹುತೇಕ ಅಪಘಾತಗಳು ಸಂಭವಿಸುವುದೇ ಇಲ್ಲ. ಕುಡಿದು ವಾಹನ ಓಡಿಸುವುದನ್ನು ನೂರಕ್ಕೆ ನೂರರಷ್ಟು ನಿಲ್ಲಿಸಿ. ನಿಮ್ಮ ಕುಟುಂಬಗಳನ್ನು ಅನಾಥ ಮಾಡಬೇಡಿ ಎಂದು ಸಿಎಂ ಕರೆ ನೀಡಿದರು.

ಮೊಬೈಲ್ ಮಾತಾಡಿಕೊಂಡು ವಾಹನ ಓಡಿಸಿದರೆ ಅಪಘಾತಗಳಾಗದೆ ಇರುತ್ತಾ? ನಿಮ್ಮ ಜೀವಕ್ಕೆ ನೀವೇ ಜವಾಬ್ದಾರಿ. ನಿಮ್ಮ ಕುಟುಂಬಕ್ಕೆ ನೀವೇ ಜವಾಬ್ದಾರಿ. ಆದ್ದರಿಂದ ಸಂಚಾರಿ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ. ಸಂಚಾರಿ ನಿಯಮ‌ ಪಾಲಿಸದೆ ವಾಹನ ಓಡಿಸುವವರ, ಕುಡಿದು ವಾಹನ ಚಲಾಯಿಸುವರ ಚಾಲನಾ ಪರವಾನಗಿಯನ್ನು ರದ್ದು ಮಾಡಿ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಸೂಚನೆ ನೀಡಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read