ತುಮಕೂರು: ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಶೆಟ್ಟಿಕೆರೆ ಹೋಬಳಿಯ ವಡೇರಹಳ್ಳಿಯಲ್ಲಿ ವಿದ್ಯುತ್ ಕಂಬದಿಂದ ಬಿದ್ದು ಲೈನ್ ಮ್ಯಾನ್ ಮೃತಪಟ್ಟಿದ್ದಾರೆ.
ಹನುಮಂತ ಜಾಲಿಕಟ್ಟೆ(29) ಮೃತಪಟ್ಟವರು ಎಂದು ಹೇಳಲಾಗಿದೆ. ವಿದ್ಯುತ್ ಕಂಬದ ಮೇಲೆ ಹನುಮಂತ ದುರಸ್ತಿ ಕಾರ್ಯ ನಿರ್ವಹಿಸುತ್ತಿದ್ದರು. ಈ ವೇಳೆ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿದ್ದು, ಅವರು ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಕಂಬದ ಮೇಲೆ ಕೆಲಸ ಮಾಡುವಾಗ ವಿದ್ಯುತ್ ಸಂಪರ್ಕ ಕಡಿತಗೊಳಿಸುವುದನ್ನು ಖಚಿತಪಡಿಸಿಕೊಳ್ಳಬೇಕು. ಆದರೆ ಬೆಸ್ಕಾಂ ಅಧಿಕಾರಿಗಳು ಮತ್ತು ಸಿಬ್ಬಂದಿಯ ನಿರ್ಲಕ್ಷ್ಯದಿಂದ ವಿದ್ಯುತ್ ಕಡಿತಗೊಳಿಸದೆ ದುರಸ್ತಿ ಕಾರ್ಯ ಕೈಗೊಳ್ಳಲಾಗಿದೆ. ಇದರಿಂದ ವಿದ್ಯುತ್ ಪ್ರವಹಿಸಿ ಹನುಮಂತ ಸಾವನ್ನಪ್ಪಿದ್ದಾರೆ. ಈ ಘಟನೆಗೆ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೃತ ಹನುಮಂತ ಬೆಳಗಾವಿ ಜಿಲ್ಲೆಯ ಗೋಕಾಕ್ ನವರಾಗಿದ್ದು, ಬೆಸ್ಕಾಂನಲ್ಲಿ ಲೈನ್ ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದರು.

