HomeKarnatakaಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಾಗಲೇ ದುರಂತ: ಜಲಪಾತದಲ್ಲಿ ಯುವಕ ನೀರು ಪಾಲು

ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಾಗಲೇ ದುರಂತ: ಜಲಪಾತದಲ್ಲಿ ಯುವಕ ನೀರು ಪಾಲು

ಶಿವಮೊಗ್ಗ: ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ಯುವಕ ನೀರುಪಾಲಾದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಯಡೂರು ಸಮೀಪದ ಅಬ್ಬಿ ಫಾಲ್ಸ್ ನಲ್ಲಿ ಭಾನುವಾರ ನಡೆದಿದೆ.

ಬೆಂಗಳೂರಿನ ಸಾಫ್ಟ್ವೇರ್ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿರುವ ಬಳ್ಳಾರಿ ಮೂಲದ ವಿನೋದ್ ಕುಮಾರ್(26) ನೀರು ಪಾಲಾದವರು ಎಂದು ಹೇಳಲಾಗಿದೆ. ವಿನೋದ್ ಕುಮಾರ್ ಸೇರಿದಂತೆ 12 ಮಂದಿ ಸ್ನೇಹಿತರು ಪ್ರವಾಸಕ್ಕೆ ಬಂದಿದ್ದರು. ಅಬ್ಬಿ ಫಾಲ್ಸ್ ನಲ್ಲಿ ಸ್ನೇಹಿತರೊಂದಿಗೆ ಇದ್ದ ವಿನೋದ್ ಕುಮಾರ್ ಕಾಲು ಜಾರಿ ಕೆಳಗೆ ಬಿದ್ದಿದ್ದಾರೆ.

ಅಗ್ನಿಶಾಮಕ ದಳ ಸಿಬ್ಬಂದಿ ಮತ್ತು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕಾಣೆಯಾದ ವಿನೋದ್ ಕುಮಾರ್ ಗಾಗಿ ಹುಡುಕಾಟ ನಡೆಸಿದ್ದಾರೆ. ಪಾಚಿಗಟ್ಟಿದ ಬಂಡೆಗಳು, ದುರ್ಗಮ ಅರಣ್ಯ ಪ್ರದೇಶ ಇರುವುದರಿಂದ ಜಲಪಾತ ಅಪಾಯಕಾರಿಯಾಗಿದೆ. ಹಿಂದೆಯೂ ಅನೇಕ ಅವಘಡಗಳು ಸಂಭವಿಸಿದ್ದ ಈ ಸ್ಥಳಕ್ಕೆ ತೆರಳದಂತೆ ಪ್ರವಾಸಿಗರಿಗೆ ಮುನ್ನೆಚ್ಚರಿಕೆ ನೀಡಲಾಗಿದೆ. ಆದರೂ ಪ್ರವಾಸಿಗರು ವೀಕ್ಷಣೆಗೆ ಬಂದು ಅನಾಹುತ ಮಾಡಿಕೊಳ್ಳುತ್ತಾರೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular