HomeKarnatakaBREAKING : ಬೆಂಗಳೂರಲ್ಲಿ ಘೋರ ದುರಂತ : ಕೃಷಿ ಹೊಂಡದಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು...

BREAKING : ಬೆಂಗಳೂರಲ್ಲಿ ಘೋರ ದುರಂತ : ಕೃಷಿ ಹೊಂಡದಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ದುರ್ಮರಣ

ಬೆಂಗಳೂರು : ಕೃಷಿ ಹೊಂಡದಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ದುರ್ಮರಣಕ್ಕೀಡಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಕರಿಬೀರನಹೊಸಹಳ್ಳಿ
ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಮರಿಯಪ್ಪ, (70) ಮುನಿಯಮ್ಮ,(60) ಭಾರತಿ (40) ಎಂದು ಗುರುತಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಧಾವಿಸಿ ಮೂವರ ಮೃತದೇಹಗಳನ್ನು ಹೊರಕ್ಕೆ ತೆಗೆದಿದ್ದಾರೆ.

ಜಮೀನಲ್ಲಿದ್ದ ಕೃಷಿ ಹೊಂಡದಲ್ಲಿ ಮುಳುಗಿ ಮೃತಪಟ್ಟಿದ್ದು, ಒಬ್ಬರನ್ನು ಒಬ್ಬರು ಕಾಪಾಡಲು ಹೋಗಿ ಈ ದುರ್ಘಟನೆ ಸಂಭವಿಸಿರಬಹುದೆಂದು ಹೇಳಲಾಗಿದೆ. ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular