
ಮೃತ ಬಾಲಕರನ್ನು ನಾಗರಾಜ (11) ಹೇಮಂತ (12) ಎಂದು ಗುರುತಿಸಲಾಗಿದೆ. ನಿನ್ನೆ ಈಜಲು ಹೋದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ತಡರಾತ್ರಿ ಬಾಲಕರ ಶವ ಹೊರ ತೆಗೆಯಲಾಗಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ನಡೆದ ಸ್ಥಳಕ್ಕೆ ಕಾಗಿನೆಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

