HomeKarnatakaBREAKING : ತುಮಕೂರಲ್ಲಿ ಘೋರ ದುರಂತ : ಕ್ಯಾಂಡಲ್ ಬೆಳಕಲ್ಲಿ ಬೈಕಿಗೆ ಪೆಟ್ರೋಲ್ ಹಾಕ್ತಿದ್ದ ಬಾಲಕಿ...

BREAKING : ತುಮಕೂರಲ್ಲಿ ಘೋರ ದುರಂತ : ಕ್ಯಾಂಡಲ್ ಬೆಳಕಲ್ಲಿ ಬೈಕಿಗೆ ಪೆಟ್ರೋಲ್ ಹಾಕ್ತಿದ್ದ ಬಾಲಕಿ ಬೆಂಕಿಗೆ ಬಲಿ

ತುಮಕೂರಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಕ್ಯಾಂಡಲ್ ಬೆಳಕಲ್ಲಿ ಬೈಕಿಗೆ ಪೆಟ್ರೋಲ್ ಹಾಕುತ್ತಿದ್ದ ಎಸ್ ಎಸ್ ಎಲ್ ಸಿ ಬಾಲಕಿ ಬೆಂಕಿಗೆ ಬಲಿಯಾಗಿದ್ದಾರೆ.

ಮೃತ ಯುವತಿಯನ್ನು ಸೌಂದರ್ಯ (16) ಎಂದು ಗುರುತಿಸಲಾಗಿದೆ. ಚಿಕಿತ್ಸೆ ಫಲಕಾರಿಯಾಗದೇ ಈಕೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.

ಕ್ಯಾಂಡಲ್ ಲೈಟ್ ನಲ್ಲಿ ಬೈಕಿಗೆ ಪೆಟ್ರೋಲ್ ಹಾಕುವಾಗ ವಿದ್ಯುತ್ ಬಂದಾಗ ಗಾಬರಿಗೊಂಡ ಸೌಂದರ್ಯ ಪೆಟ್ರೋಲ್ ಬಾಟಲಿ ಕೈ ಬಿಟ್ಟಿದ್ದಾಳೆ. ಈ ವೇಳೆ ಪೆಟ್ರೋಲ್ ಚೆಲ್ಲಿ ಮೇಣದಬತ್ತಿಯ ಕಿಡಿಯಿಂದ ಬೆಂಕಿ ಹತ್ತಿಕೊಂಡಿತ್ತು,  ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸೌಂದರ್ಯಳನ್ನು ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸೌಂದರ್ಯ ಮೃತಪಟ್ಟಿದ್ದಾರೆ. ಅಮೃತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular