
ಮೃತರು ಗರೀಬ್ ಸಾಬ್, ಸುಮಯ್ಯ, ಹಜೀನಾ, ಮೊಹ್ಮದ್ ಶಬೀರ್, ಮೊಹಮದ್ ಮುನೀರ್ ಎಂದು ತಿಳಿದುಬಂದಿದೆ.
ಸಾಲಬಾಧೆ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ. ಆತ್ಮಹತ್ಯೆಗೂ ಮೊದಲು ವಿಡಿಯೋ ಸಹ ಮಾಡಿದ್ದಾರೆ.ಘಟನೆ ನಡೆದ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ತಿಲಕ್ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.ಗಂಡ-ಹೆಂಡತಿ ಹಾಗೂ ಅವರ ಮೂವರು ಮಕ್ಕಳು ಆತ್ಮಹತ್ಯೆಗೆ ಶರಣಾಗಿದ್ದಾರೆ.. ಮೃತರು ಶಿರಾ ತಾಲ್ಲೂಕು ಲಕ್ಕನಹಳ್ಳಿಯವರು ಎಂದು ಗುರುತಿಸಲಾಗಿದೆ. ಇಬ್ಬರ ದೇಹಗಳು ನೇಣು ಬಿಗಿದ ಸ್ಥಿತಿಯಲ್ಲಿ ಇದ್ದವು. ಮೂವರು ಮಕ್ಕಳ ಮೃತದೇಹ ಹಾಸಿಗೆಯಲ್ಲಿದ್ದವು.

