HomeKarnatakaನಾಗರ ಪಂಚಮಿ ದಿನವೇ ಘೋರ ದುರಂತ: ಹಾವು ಕಚ್ಚಿ ಬಾಣಂತಿ ಸಾವು

ನಾಗರ ಪಂಚಮಿ ದಿನವೇ ಘೋರ ದುರಂತ: ಹಾವು ಕಚ್ಚಿ ಬಾಣಂತಿ ಸಾವು

ಶಿವಮೊಗ್ಗ: ನಾಗರ ಪಂಚಮಿ ಹಬ್ಬದ ದಿನವೇ ಹಾವು ಕಚ್ಚಿ ಬಾಣಂತಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಹುತ್ತಾದಿಂಬ ಗ್ರಾಮದಲ್ಲಿ ನಡೆದಿದೆ.

22 ವರ್ಷದ ರಂಜಿತಾ ಮೃತಪಟ್ಟವರು. ಗದ್ದೆಯಲ್ಲಿ ಮೇವು ತರಲು ಹೋಗಿದ್ದ ವೇಳೆ ಹಾವು ಕಚ್ಚಿ ಸಾವನ್ನಪ್ಪಿದ್ದಾರೆ. ಮೇವು ತರುವಾಗ ಹಾವು ರಂಜಿತಾ ಅವರಿಗೆ ಕಚ್ಚಿದೆ. ಆದರೆ ಅವರಿಗೆ ತಕ್ಷಣಕ್ಕೆ ಗೊತ್ತಾಗಿಲ್ಲ. ಕೆಲ ಸಮಯದ ಬಳಿಕ ಹಾವು ಕಚ್ಚಿರುವುದು ಗೊತ್ತಾಗಿದೆ. ಕುಟುಂಬದವರು ಹೋಗಿ ನೋಡಿದಾಗ ರಂಜಿತಾ ಗದ್ದೆಯಲ್ಲಿ ಕುಸಿದು ಬಿದ್ದಿದ್ದರು.

ಕೂಡಲೇ ಅವರನ್ನು ಸಾಗರ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲಿ ಸಾವನ್ನಪ್ಪಿದ್ದಾರೆ. ರಂಜಿತಾ ಅವರಿಗೆ ಒಂದು ವರ್ಷದ ಹೆಣ್ಣು ಮಗು, ನಾಲ್ಕು ತಿಂಗಳ ಹಸುಗೂಸು ಇದೆ. ರಂಜಿತಾ ಮೃತಪಟ್ಟ ಹಿನ್ನಲೆಯಲ್ಲಿ ಶವಗಾರದ ಬಳಿ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular