ಚಾಮರಾಜನಗರ: ಮದುವೆಯಲ್ಲಿ ಫೋಟೋ ತೆಗೆಯುತ್ತಿದ್ದಾಗ ಹೃದಯಾಘಾತದಿಂದ ಫೋಟೋಗ್ರಾಫರ್ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ಘಟನೆ ನಡೆದಿದೆ. ಬೊಮ್ಮನಹಳ್ಳಿ ಗ್ರಾಮದ ಮೂರ್ತಿ ಮೃತಪಟ್ಟವರು ಎಂದು ಹೇಳಲಾಗಿದೆ. ಮದುವೆ ವೇಳೆಯಲ್ಲಿ ಫೋಟೋ ತೆಗೆಯುತ್ತಿದ್ದಾಗಲೇ ಹೃದಯಾಘಾತ ಸಂಭವಿಸಿ ಮೂರ್ತಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಗುಂಡ್ಲುಪೇಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

