ಯಾದಗಿರಿ: ಭೀಮಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಯಾದರಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸಣಗಿ ಬ್ಯಾರೇಜ್ ಸಮೀಪ ನಡೆದಿದೆ.
ಶಕೀಲ್(18), ಮೆಹಬೂಬ್(20) ಮೃತಪಟ್ಟ ಯುವಕರು ಎಂದು ಗುರುತಿಸಲಾಗಿದೆ. ಬೇಸಿಗೆ ದಿನವಾಗಿದ್ದರಿಂದ ಸ್ನೇಹಿತರೊಂದಿಗೆ ಈಜಾಡಲು ಹೋಗಿದ್ದ ಇಬ್ಬರೂ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸ್ಥಳೀಯರ ನೆರವಿನಿಂದ ಮೃತದೇಹಗಳನ್ನು ಹೊರ ತೆಗೆಯಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.