HomeKarnatakaನದಿಯಲ್ಲಿ ಈಜಲು ಹೋದಾಗಲೇ ದುರಂತ: ಇಬ್ಬರು ಯುವಕರು ನೀರು ಪಾಲು

ನದಿಯಲ್ಲಿ ಈಜಲು ಹೋದಾಗಲೇ ದುರಂತ: ಇಬ್ಬರು ಯುವಕರು ನೀರು ಪಾಲು

ಚಿಕ್ಕಮಗಳೂರು: ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರು ಪಾಲಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ಸಮೀಪದ ಬಾಳೆಹೊಳೆ ಬಳಿ ನಡೆದಿದೆ.

ಅಭಿಷೇಕ್(27), ಯೋಗೀಶ್(17) ನೀರು ಪಾಲಾದವರು ಎಂದು ಹೇಳಲಾಗಿದೆ. ಇಬ್ಬರು ಕೊಡಗು ಜಿಲ್ಲೆಯವರಾಗಿದ್ದಾರೆ. ಅಭಿಷೇಕ್ ಅವರ ಅಕ್ಕ ಕಳಸದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದು, ಅವರ ಮನೆಗೆ ಬಂದಿದ್ದ ಇಬ್ಬರೂ ಭದ್ರಾ ನದಿಯಲ್ಲಿ ಈಜಲು ಹೋಗಿದ್ದಾರೆ. ಆದರೆ, ನದಿಯ ಆಳದ ಬಗ್ಗೆ ತಿಳಿಯದ ಅವರು ನೀರಲ್ಲಿ ಮುಳುಗಿದ್ದಾರೆ ಎನ್ನಲಾಗಿದೆ.

ಕಳಸ ಠಾಣೆ ಪೊಲೀಸರು, ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳೀಯರ ನೆರವಿನಿಂದ ನೀರಲ್ಲಿ ಮುಳುಗಿದ ಇಬ್ಬರಿಗಾಗಿ ಶೋಧ ನಡೆಸಿದ್ದಾರೆ. ಕಳಸ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular