ಬಾಗಲಕೋಟೆ: ಕೃಷ್ಣಾ ನದಿಯಲ್ಲಿ ಈಜಲು ತೆರಳಿದ್ದ ಯುವಕ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಮೈಗೂರು ಗ್ರಾಮದ ಬಳಿ ಘಟನೆ ನಡೆದಿದೆ.
ನಿಂಗರಾಜ ಪಾಟೀಲ(19) ಮೃತಪಟ್ಟ ಯುವಕ ಎಂದು ಹೇಳಲಾಗಿದೆ. ಕೃಷ್ಣಾ ನದಿಯಲ್ಲಿ ಈಜಲು ಹೋಗಿದ್ದ ವೇಳೆ ದುರಂತ ನಡೆದಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ನದಿಯಿಂದ ಮೃತದೇಹ ಹೊರಗೆ ತೆಗೆದಿದ್ದಾರೆ. ಜಮಖಂಡಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

