HomeKarnatakaಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದಾಗಲೇ ದುರಂತ: ಇಬ್ಬರು ಯುವಕರು ನೀರಲ್ಲಿ ಮುಳುಗಿ ಸಾವು

ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದಾಗಲೇ ದುರಂತ: ಇಬ್ಬರು ಯುವಕರು ನೀರಲ್ಲಿ ಮುಳುಗಿ ಸಾವು

ಬೆಂಗಳೂರು: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಪೊಲೀಸ್ ಠಾಣೆ ವ್ಯಾಪ್ತಿಯ ಬೇಗಿಹಳ್ಳಿಯಲ್ಲಿ ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಶಹಾಪುರದ ಆನಂದ್(21), ಅಂಬರೀಶ್(22) ಮೃತಪಟ್ಟವರು ಎಂದು ಹೇಳಲಾಗಿದೆ. ಸ್ನೇಹಿತರ ಜೊತೆಗೆ ಕೆರೆಗೆ ಈಜಲು ಹೋಗಿದ್ದಾಗ ಘಟನೆ ನಡೆದಿದೆ.

ನಾಲ್ವರು ಸ್ನೇಹಿತರು ಕೆರೆಯಲ್ಲಿ ಈಜಲು ತೆರಳಿದ್ದರು. ಈಜು ಬಾರದ ಇಬ್ಬರು ಮೃತಪಟ್ಟಿದ್ದಾರೆ. ಆನೇಕಲ್ ಮತ್ತು ಎಲೆಕ್ಟ್ರಾನಿಕ್ ಸಿಟಿ ಅಗ್ನಿಶಾಮಕದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದು, ನಿನ್ನೆ ಮೃತದೇಹಗಳು ಪತ್ತೆಯಾಗಿರಲಿಲ್ಲ. ಕತ್ತಲಾಗಿದ್ದರಿಂದ ಕಾರ್ಯಾಚರಣೆ ನಿಲ್ಲಿಸಲಾಗಿದ್ದು, ಶನಿವಾರ ಬೆಳಗ್ಗೆ ಮತ್ತೆ ಮೃತದೇಹಗಳಿಗ ಹುಡುಕಾಟ ನಡೆಸಲಾಗುವುದು. ಬನ್ನೇರುಘಟ್ಟ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular