HomeIndiaಭೀಕರ ಅಪಘಾತ: ಜಾನುವಾರುಗಳಿಗೆ ಡಿಕ್ಕಿ ಹೊಡೆದು ನಾಲೆಗೆ ಬಿದ್ದ ಕಾರ್: 7 ಜನ ಸಾವು

ಭೀಕರ ಅಪಘಾತ: ಜಾನುವಾರುಗಳಿಗೆ ಡಿಕ್ಕಿ ಹೊಡೆದು ನಾಲೆಗೆ ಬಿದ್ದ ಕಾರ್: 7 ಜನ ಸಾವು

ನವದೆಹಲಿ: ಉತ್ತರ ಪ್ರದೇಶದ ಶ್ರಾವಸ್ತಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಜಾನುವಾರುಗಳಿಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಕಾರ್ ನಾಲೆಗೆ ಬಿದ್ದು 7 ಮಂದಿ ಸಾವನ್ನಪ್ಪಿದ್ದಾರೆ.

ಅಪಘಾತದಲ್ಲಿ ಮೃತಪಟ್ಟವರಲ್ಲಿ ಇಬ್ಬರು ಮಕ್ಕಳೂ ಸೇರಿದ್ದಾರೆ. ಘಟನೆಯ ಮಾಹಿತಿ ಪಡೆದ ಐಕೌನಾ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಗಾಯಾಳುಗಳನ್ನು ನಾಲೆಯಿಂದ ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಯಿತು. ಶ್ರಾವಸ್ತಿಯ ಇಕೌನಾ ಪೊಲೀಸ್ ಠಾಣೆ ವ್ಯಾಪ್ತಿಯ ಸೀತಾದ್ವಾರದ ಬಳಿ ಈ ಅಪಘಾತ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆಯ ಬಗ್ಗೆ ಮಾಹಿತಿ ನೀಡಿದ ಪೊಲೀಸರು, ಇದ್ದಕ್ಕಿದ್ದಂತೆ ದನವೊಂದು ಕಾರಿನ ಮುಂದೆ ಬಂದಿದ್ದು, ಅದನ್ನು ಉಳಿಸಲು ಪ್ರಯತ್ನಿಸುವಾಗ ಕಾರ್ ಪಲ್ಟಿಯಾಗಿ ಹಳ್ಳಕ್ಕೆ ಬಿದ್ದಿದೆ ಎಂದು ಚಾಲಕ ಹೇಳಿದರು. ಈ ಘಟನೆಯಲ್ಲಿ ಚಾಲಕ ಗಾಯಗೊಂಡಿದ್ದಾನೆ. ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಉಳಿದವರು ಸಾವನ್ನಪ್ಪಿದ್ದಾರೆ.

ಕಾರಿನಲ್ಲಿದ್ದವರೆಲ್ಲರೂ ನೇಪಾಲಗಂಜ್ ನಿವಾಸಿಗಳಾಗಿದ್ದು, ಯಾವುದೋ ಕೆಲಸದ ನಿಮಿತ್ತ ಇಲ್ಲಿಗೆ ಬಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular