ಶಿವಮೊಗ್ಗ: ಕರ್ತವ್ಯದ ವೇಳೆಯಲ್ಲಿ ವಿದ್ಯುತ್ ಪ್ರವಹಿಸಿ ಪವರ್ ಮ್ಯಾನ್ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರದ ಕೆಇಬಿ ಪವರ್ ಸ್ಟೇಷನ್ ಎದುರು ನಡೆದಿದೆ.
ಹರೀಶ್(50) ಮೃತಪಟ್ಟವರು. ಶನಿವಾರ ಸುರಿದ ಭಾರಿ ಮಳೆಯಿಂದ ಶಿಕಾರಿಪುರದ ಹಲವು ಕಡೆ ಮರದ ಕೊಂಬೆಗಳು ನೆಲಕ್ಕೆ ಉರುಳಿದ್ದು, ಇದರಿಂದ ವಿದ್ಯುತ್ ತಂತಿಗಳು ಕೆಳಗೆ ಬಿದ್ದಿವೆ. ಇದನ್ನು ಸರಿಪಡಿಸಲು 110/11 ಕೆವಿ ಸ್ಟೇಷನ್ ನಲ್ಲಿ ದುರಸ್ತಿ ಮಾಡುತ್ತಿದ್ದಾಗ ಆಕಸ್ಮಿಕವಾಗಿ ವಿದ್ಯುತ್ ಸ್ಪರ್ಶಿಸಿ ಹರೀಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರಿಗೆ ಪತ್ನಿ ಮತ್ತು ಮೂವರು ಹೆಣ್ಣು ಮಕ್ಕಳಿದ್ದಾರೆ. ಕುಟುಂಬಕ್ಕೆ ಆಧಾರವಾಗಿದ್ದ ಹರೀಶ್ ಅವರನ್ನು ಕಳೆದುಕೊಂಡ ಕುಟುಂಬ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಮೃತರ ಕುಟುಂಬದವರಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡಬೇಕು. ಅವರ ಕುಟುಂಬಕ್ಕೆ ಆರ್ಥಿಕ ನೆರವು ಘೋಷಿಸಬೇಕು ಎಂದು ಲೈನ್ ಮ್ಯಾನ್ ಸಂಘದ ಸದಸ್ಯರು ಒತ್ತಾಯಿಸಿದ್ದಾರೆ.

