HomeKarnatakaSHOCKING : ಮೈಸೂರಿನಲ್ಲಿ ದಾರುಣ ಘಟನೆ ; ಪತ್ನಿ, ಇಬ್ಬರು ಪುಟ್ಟ ಮಕ್ಕಳನ್ನು ಹತ್ಯೆಗೈದು ಪತಿ...

SHOCKING : ಮೈಸೂರಿನಲ್ಲಿ ದಾರುಣ ಘಟನೆ ; ಪತ್ನಿ, ಇಬ್ಬರು ಪುಟ್ಟ ಮಕ್ಕಳನ್ನು ಹತ್ಯೆಗೈದು ಪತಿ ಆತ್ಮಹತ್ಯೆಗೆ ಶರಣು.!

ಮೈಸೂರು: ರಾಜ್ಯವನ್ನು ಬೆಚ್ಚಿಬೀಳಿಸುವಂತಹ ಭೀಕರ ಘಟನೆ ಮೈಸೂರು ಜಿಲ್ಲೆಯ ಹುಣಸೂರು ಪಟ್ಟಣದಲ್ಲಿ ನಡೆದಿದೆ. ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ 43 ವರ್ಷದ ಹರೀಶ್ ಎಂಬಾತ ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಹತ್ಯೆಗೈದು ಬಳಿಕ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆ ಇಡೀ ಪ್ರದೇಶದಲ್ಲಿ ಆತಂಕ ಹಾಗೂ ಶೋಕದ ವಾತಾವರಣವನ್ನು ನಿರ್ಮಿಸಿದೆ.

ಮೃತರನ್ನು ಹರೀಶ್ (49), ಅವರ ಪತ್ನಿ ನಿಶ್ಚಿತಾ (40), ಪುತ್ರಿ ನೆಕ್ಷಾ (13) ಹಾಗೂ ಮತ್ತೊಬ್ಬ ಪುತ್ರಿ ರಕ್ಷಾ (6) ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಹರೀಶ್ ಮೊದಲು ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಹತ್ಯೆಗೈದು ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.ಸಾಯುವ ಮುನ್ನ ಪತ್ನಿ ಹಾಗೂ ಮಕ್ಕಳ ಬಾಯಿಗೆ ಟೇಪ್ ಅಂಟಿಸಿ ಕೊಲೆ ಮಾಡಿ ಹರೀಶ್ ತಾನು ಕೂಡ ಸೂಸೈಡ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಹುಣಸೂರು ನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಘಟನಾ ಸ್ಥಳದಿಂದ ಅಗತ್ಯ ಸಾಕ್ಷ್ಯಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ.ಸ್ಥಳಕ್ಕೆ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಮಲ್ಲಿಕಾರ್ಜುನ ಬಾಲದಂಡೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಪ್ರತಿಯೊಂದು ಆಯಾಮವನ್ನು ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡೆತ್ ನೋಟ್ ನಲ್ಲೇನಿದೆ..?

ಡೆತ್ ನೋಟ್ ಬರೆದಿಟ್ಟು ಹರೀಶ್ ಸೂಸೈಡ್ ಮಾಡಿಕೊಂಡಿದ್ದು, ‘ಎಲ್ಲಾ ದಾಖಲೆಗಳು ಲಾಕರ್  ನಲ್ಲಿದೆ.  ಕೀ ಕೂಡ ಅಲ್ಲೇ ಇದೆ. ನಾನು ಮೇಲ್ಮಹಡಿಯ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದೇನೆ, ಬಾಕ್ಸ್ ನ್ನ ಕುಳ್ಳೇಗೌಡ ಮಲ್ಲು ಅವರಿಗೆ ಕೊಡಿ’ ಎಂದು ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ.

ಪ್ರಾಥಮಿಕ ಹಂತದಲ್ಲಿ ಕುಟುಂಬ ಕಲಹವೇ ಈ ದುರಂತಕ್ಕೆ ಕಾರಣವೇ ಅಥವಾ ಬೇರೆ ಯಾವುದೇ ಹಿನ್ನೆಲೆ ಇದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಮೃತರ ಕುಟುಂಬದ ಸದಸ್ಯರು, ಸಂಬಂಧಿಕರು ಹಾಗೂ ಸ್ಥಳೀಯರಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಹುಣಸೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಯ ನಿಖರ ಕಾರಣ ಮರಣೋತ್ತರ ಪರೀಕ್ಷೆಯ ವರದಿ, ತಾಂತ್ರಿಕ ಸಾಕ್ಷ್ಯಗಳು ಹಾಗೂ ಪೊಲೀಸ್ ತನಿಖೆಯ ಬಳಿಕವೇ ಸ್ಪಷ್ಟವಾಗಲಿದೆ. ಅಧಿಕೃತ ಮಾಹಿತಿ ಹೊರಬರುವವರೆಗೆ ಘಟನೆ ಕುರಿತು ಊಹಾಪೋಹಗಳಿಗೆ ಅವಕಾಶ ನೀಡದಂತೆ ಪೊಲೀಸರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ . ಡೆತ್ ನೋಟ್ ಬರೆದಿಟ್ಟು ಹರೀಶ್ ಹೆಂಡತಿ ಮಕ್ಕಳನ್ನು ಕೊಂದು ಸೂಸೈಡ್ ಮಾಡಿಕೊಂಡಿದ್ದು, ಕೌಟುಂಬಿಕ ಕಲಹ ಅಥವಾ ಸಾಲಭಾದೆ ಘಟನೆಗೆ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಅದೇನೆ ಇರಲಿ ಪೊಲೀಸ್ ತನಿಖೆಯಿಂದಷ್ಟೇ ಸತ್ಯ ಹೊರಬರಬೇಕಿದೆ.

ಸಹಾಯ ಬೇಕಿದ್ದರೆ: ನೀವು ಅಥವಾ ನಿಮಗೆ ಪರಿಚಿತರಾದ ಯಾರಾದರೂ ಭಾವನಾತ್ಮಕ ಸಂಕಷ್ಟ, ಆತ್ಮಹತ್ಯೆಯ ಆಲೋಚನೆ ಅಥವಾ ಮಾನಸಿಕ ಒತ್ತಡದಿಂದ ಬಳಲುತ್ತಿದ್ದರೆ, ತಕ್ಷಣ ನೆರವು ಪಡೆಯಿರಿ. ಟೆಲಿ-MANAS ರಾಷ್ಟ್ರೀಯ ಮಾನಸಿಕ ಆರೋಗ್ಯ ಸಹಾಯವಾಣಿ 14416 ಅಥವಾ 1-800-89-14416 ಗೆ 24×7 ಕರೆ ಮಾಡಬಹುದು. ತುರ್ತು ಪರಿಸ್ಥಿತಿಯಲ್ಲಿ ಸಮೀಪದ ಆಸ್ಪತ್ರೆ ಅಥವಾ ಪೊಲೀಸ್ ಸಹಾಯವನ್ನೂ ಪಡೆಯಿರಿ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular