ದುರಂತ…! ವಿಶ್ವಕಪ್ ಫೈನಲ್ ನಲ್ಲಿ ಭಾರತ ಸೋತು ರೋಹಿತ್ ಕಣ್ಣೀರಿಟ್ಟಿದ್ದನ್ನು ಕಂಡು ಅಭಿಮಾನಿಗೆ ಹೃದಯಾಘಾತ

ತಿರುಪತಿ: ಅಹಮದಾಬಾದ್ ನಲ್ಲಿ ಭಾನುವಾರ ನಡೆದ 2023 ರ ವಿಶ್ವಕಪ್ ಫೈನಲ್‌ನಲ್ಲಿ ಭಾರತ ತಂಡದ ಸೋಲಿನ ನಂತರ ತಿರುಪತಿ ಮಂಡಲದ ದುರ್ಗಾಸಮುದ್ರದ ಜ್ಯೋತಿ ಕುಮಾರ್ ಯಾದವ್ ಎಂಬ ಭಾರತೀಯ ಕ್ರಿಕೆಟ್ ಅಭಿಮಾನಿ ಹೃದಯಾಘಾತದಿಂದ ನಿಧನರಾದರು.

ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು, ಆದರೆ ವೈದ್ಯರು ಅದಾಗಲೇ ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು.

ಫೈನಲ್‌ನಲ್ಲಿ ಸೋತ ನಂತರ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಕಣ್ಣೀರನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ. ಭಾರತ ತಂಡದ ನಾಯಕ ಮಾತ್ರವಲ್ಲದೇ, ವಿರಾಟ್ ಕೊಹ್ಲಿ ಮತ್ತು ಮೊಹಮ್ಮದ್ ಸಿರಾಜ್ ಅವರಂತಹ ಆಟಗಾರರು ಸಹ ತಮ್ಮನ್ನು ತಡೆದುಕೊಳ್ಳಲು ಸಾಧ್ಯವಾಗಲಿಲ್ಲ. ಇದೆಲ್ಲವನ್ನು ಕಂಡ ಇಂಜಿನಿಯರ್ ಜ್ಯೋತಿ ಕುಮಾರ್ ಯಾದವ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.

https://twitter.com/TeluguScribe/status/1726509261759586542

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read