HomeKarnatakaBREAKING : ಬೆಂಗಳೂರಲ್ಲಿ ಘೋರ ದುರಂತ : ಶೆಡ್'ಗೆ ಬೆಂಕಿ ತಗುಲಿ ಇಬ್ಬರು ಮಕ್ಕಳು ಸಜೀವ...

BREAKING : ಬೆಂಗಳೂರಲ್ಲಿ ಘೋರ ದುರಂತ : ಶೆಡ್’ಗೆ ಬೆಂಕಿ ತಗುಲಿ ಇಬ್ಬರು ಮಕ್ಕಳು ಸಜೀವ ದಹನ

ಬೆಂಗಳೂರು: ನಗರದ ಕೊತ್ತನೂರು ಪೊಲೀಸ್ ಠಾಣಾ ವ್ಯಾಪ್ತಿಯ ನಾರಾಯಣಪುರದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಇಬ್ಬರು ಎಳೆಹಸುಳೆಗಳು ಬೆಂಕಿಗೆ ಆಹುತಿಯಾಗಿರುವ ಮನಕಲಕುವ ಘಟನೆ ನಡೆದಿದೆ.

ಘಟನೆಯ ವಿವರ

ಕೂಲಿ ಕೆಲಸಕ್ಕಾಗಿ ನಗರಕ್ಕೆ ಬಂದಿದ್ದ ಕುಟುಂಬವೊಂದು ನಾರಾಯಣಪುರದಲ್ಲಿ ಶೆಡ್ ಹಾಕಿಕೊಂಡು ವಾಸವಿತ್ತು. ಐದು ವರ್ಷದ ಅರ್ಜುನ ಹಾಗೂ ಮೂರು ವರ್ಷದ ಆಶಾ ಮೃತಪಟ್ಟ ದುರ್ದೈವಿಗಳು. ಇಂದು ಪೋಷಕರು ಕೆಲಸಕ್ಕೆ ಹೋಗಿದ್ದ ಸಮಯದಲ್ಲಿ, ಅಜ್ಜಿ ಮಕ್ಕಳನ್ನು ಶೆಡ್‌ನಲ್ಲಿ ಬಿಟ್ಟು ಸ್ವಲ್ಪ ದೂರ ಹೊರಗಡೆ ಹೋಗಿದ್ದರು. ಈ ವೇಳೆ ಅನಿರೀಕ್ಷಿತವಾಗಿ ಶೆಡ್‌ಗೆ ಬೆಂಕಿ ಹೊತ್ತಿಕೊಂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಜೀವ ದಹನ: ಕ್ಷಣಾರ್ಧದಲ್ಲಿ ಬೆಂಕಿ ಇಡೀ ಶೆಡ್ ಅನ್ನು ಆವರಿಸಿಕೊಂಡಿದ್ದರಿಂದ ಒಳಗೆ ಮಲಗಿದ್ದ ಮಕ್ಕಳಿಗೆ ಹೊರಬರಲು ಸಾಧ್ಯವಾಗದೆ ಬೆಂಕಿಯ ಕೆನ್ನಾಲಗೆಗೆ ಸಿಲುಕಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮಕ್ಕಳ ಕಿರುಚಾಟ ಕೇಳಿ ಸ್ಥಳೀಯರು ಓಡಿ ಬಂದು ಬೆಂಕಿ ನಂದಿಸಲು ಪ್ರಯತ್ನಿಸಿದರೂ ಅಷ್ಟರಲ್ಲೇ ಎಲ್ಲವೂ ಸುಟ್ಟು ಭಸ್ಮವಾಗಿತ್ತು.

ಸ್ಥಳಕ್ಕೆ ಪೊಲೀಸರ ಭೇಟಿ: ಘಟನಾ ಸ್ಥಳಕ್ಕೆ ಕೊತ್ತನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಕಿ ತಗುಲಲು ನಿಖರ ಕಾರಣವೇನು ಎಂಬುದು ಇನ್ನು ತಿಳಿದುಬಂದಿಲ್ಲ ಕೆಲಸಕ್ಕೆ ಹೋಗಿದ್ದ ಪೋಷಕರು ಅಕ್ಷರಶಃ ಬೀದಿಗೆ ಬಿದ್ದಿದ್ದು, ಮಕ್ಕಳನ್ನು ಕಳೆದುಕೊಂಡು ಅವರ ಆಕ್ರಂದನ ಮುಗಿಲು ಮುಟ್ಟಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular