HomeKarnatakaBREAKING : ಬೀದರ್‌ನಲ್ಲಿ ಘೋರ ದುರಂತ : ಶಾಲಾ ಕಟ್ಟಡದಿಂದ ಬಿದ್ದು 'SSLC'  ಬಾಲಕ ಸಾವು.!

BREAKING : ಬೀದರ್‌ನಲ್ಲಿ ಘೋರ ದುರಂತ : ಶಾಲಾ ಕಟ್ಟಡದಿಂದ ಬಿದ್ದು ‘SSLC’  ಬಾಲಕ ಸಾವು.!

ಬೀದರ್: ನಗರದ ಎಲ್‌ಐಸಿ ಕಾಲೋನಿಯಲ್ಲಿರುವ ಜನಸೇವಾ ಖಾಸಗಿ ಶಾಲೆಯಲ್ಲಿ ನಡೆದ ದುರಂತದಲ್ಲಿ 15 ವರ್ಷದ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಮೃತ ಬಾಲಕನನ್ನು ಶಾಂತಿನಗರ ನಿವಾಸಿ ಸಮೀರ್ ಎಂದು ಗುರುತಿಸಲಾಗಿದೆ.

ಮಾಹಿತಿಯ ಪ್ರಕಾರ, ಸಮೀರ್ (15) ಶಾಲಾ ಕಟ್ಟಡದಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಘಟನೆಯ ಬಳಿಕ ಬಾಲಕನ ಕುಟುಂಬಸ್ಥರು ಶಾಲಾ ಸಿಬ್ಬಂದಿ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಪೋಷಕರ ಆರೋಪದಂತೆ, ಶಾಲಾ ಸಿಬ್ಬಂದಿಯ ಕಿರುಕುಳ ಮತ್ತು ನಿರ್ಲಕ್ಷ್ಯದಿಂದ ಈ ದುರಂತ ಸಂಭವಿಸಿದೆ. ಅಲ್ಲದೆ, ಘಟನೆ ಕುರಿತು ಕುಟುಂಬಕ್ಕೆ ಸಮಯಕ್ಕೆ ಸರಿಯಾಗಿ ಮಾಹಿತಿ ನೀಡದೆ, ಪೋಷಕರ ಅನುಮತಿ ಇಲ್ಲದೆ ಮೃತದೇಹದ ಮರಣೋತ್ತರ ಪರೀಕ್ಷೆ (ಪೋಸ್ಟ್‌ಮಾರ್ಟಂ) ನಡೆಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದಲ್ಲದೆ, ಮೃತದೇಹವನ್ನು ಕುಟುಂಬಸ್ಥರ ಗಮನಕ್ಕೆ ತರದೇ ಶಾಲಾ ಸಿಬ್ಬಂದಿಯೇ ರವಾನಿಸಿರುವುದಾಗಿ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಘಟನೆಯ ಕುರಿತು ಸಂಬಂಧಪಟ್ಟ ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಬಾಲಕನ ಸಾವಿಗೆ ನಿಖರ ಕಾರಣವೇನು ಎಂಬುದು ತನಿಖೆಯ ಬಳಿಕ ತಿಳಿದುಬರಲಿದೆ. ಕುಟುಂಬಸ್ಥರು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಮೇಲಿನ ಮಾಹಿತಿಯಲ್ಲಿರುವ ಕೆಲವು ಆರೋಪಗಳು ಪೋಷಕರು ಮಾಡಿರುವ ಆರೋಪಗಳಾಗಿದ್ದು, ಅವುಗಳ ಸತ್ಯಾಸತ್ಯತೆ ಕುರಿತು ಅಧಿಕೃತ ತನಿಖೆ ನಡೆಯಬೇಕಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular