ಬಿಹಾರದಲ್ಲಿ ಹಳಿ ದಾಟುವಾಗ ರೈಲು ಡಿಕ್ಕಿ ಹೊಡೆದು ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಮಹಿಳೆ, ಮಗಳು ಸೇರಿದಂತೆ ನಾಲ್ವರು ಜನರು ರಾಹುವಾ ಗ್ರಾಮದ ನಾಲ್ವರು ನಿವಾಸಿಗಳು ಹತ್ತಿರದ ಪ್ರದೇಶದಲ್ಲಿ ನಡೆದ ಜಾತ್ರೆಯಲ್ಲಿ ಭಾಗವಹಿಸಿ ಮನೆಗೆ ಹಿಂತಿರುಗುತ್ತಿದ್ದರು .
ಈ ವೇಳೆ ಅವಸರದಲ್ಲಿ ಹಳಿ ದಾಟುವಾಗ ಆಮ್ರಪಾಲಿ ಎಕ್ಸ್ಪ್ರೆಸ್ ರೈಲು ಡಿಕ್ಕಿ ಹೊಡೆದಿದೆ. ಈ ಘಟನೆ ಬರೌನಿ-ಕತಿಹಾರ್ ವಿಭಾಗದಲ್ಲಿ ಸಂಭವಿಸಿದೆ.
ಮೃತರನ್ನು ರೀತಾ ದೇವಿ (40), ಅವರ ಮಗಳು ರೋಶ್ನಿ ಕುಮಾರಿ (14), ಏಳು ವರ್ಷದ ಅರೋಹಿ ಕುಮಾರಿ ಮತ್ತು ಅವರ ಚಿಕ್ಕಪ್ಪ ಧರ್ಮ ದೇವ್ ಮಹ್ತೊ (35) ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಅವರ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಲಾಗಿದೆ.