ಹಾವೇರಿ : ಹಾವೇರಿಯಲ್ಲಿ ಘೋರ ದುರಂತ ಸಂಭವಿಸಿದ್ದು, ವಿದ್ಯುತ್ ತಂತಿ ತುಂಡಾಗಿ ಬಿದ್ದು ವಿದ್ಯಾರ್ಥಿ ಮೃತಪಟ್ಟಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.
ಹಾವೇರಿ ಜಿಲ್ಲೆಯ ಹಿರೆಕೆರೂರಿನ ಹಂಸಬಾವಿ ಗ್ರಾಮದ ಮೃತ್ಯುಂಜಯ ಶಾಲೆಯಲ್ಲಿ ಈ ಘಟನೆ ನಡೆದಿದೆ .ಮೃತ ಬಾಲಕನನ್ನು ಮೊಹಮ್ಮದ್ ಶಾ ಗೌಸ್ ರಟ್ಟೀಹಳ್ಳಿ (12) ಎಂದು ಗುರುತಿಸಲಾಗಿದೆ. ಗಾಯಗೊಂಡ ಇಬ್ಬರು ಮಕ್ಕಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಭಾರಿ ಗಾಳಿಗೆ ವಿದ್ಯುತ್ ತಂತಿ ಶಾಲೆ ಆವರಣದಲ್ಲಿ ತುಂಡಾಗಿ ಬಿದ್ದಿದ್ದು, ಮಧ್ಯಾಹ್ನ ಊಟಕ್ಕೆ ಬಿಟ್ಟ ಸಮಯದಲ್ಲಿ ಈ ಘಟನೆ ನಡೆದಿದೆ.
You Might Also Like
TAGGED:ಹಾವೇರಿ