ಮಂಡ್ಯ : ಗಣೇಶ ವಿಸರ್ಜನೆ ವೇಳೆ ಯುವಕ ನೀರಿನಲ್ಲಿ ಸಾವನ್ನಪ್ಪಿದ ಘಟನೆ ಮಂಡ್ಯದ ಬೇಲೂರು ಗ್ರಾಮದ ಕೆರೆಯಲ್ಲಿ ನಡೆದಿದೆ.
ಗಣೇಶನನ್ನು ವಿಸರ್ಜನೆ ಮಾಡಲು ಯುವಕರು ಬೇಲೂರು ಕೆರೆಗೆ ಬಂದಿದ್ದರು. ಗಣೇಶನನ್ನು ವಿಸರ್ಜನೆ ಮಾಡುವಾಗ ಯುವಕ ಪ್ರದೀಪ್ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.
ಮೃತನನ್ನು ಪ್ರದೀಪ್ (28) ಎಂದು ಗುರುತಿಸಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ಪ್ರದೀಪ್ ಶವ ಹೊರತೆಗೆದಿದ್ದಾರೆ. ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
TAGGED:ಮಂಡ್ಯ