HomeLatest Newsಮಂಡ್ಯದಲ್ಲಿ ಘೋರ ದುರಂತ: ಹಳ್ಳದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಸಾವು

ಮಂಡ್ಯದಲ್ಲಿ ಘೋರ ದುರಂತ: ಹಳ್ಳದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಸಾವು

ಮಂಡ್ಯ: ಹಳ್ಳದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕ್ಯಾತಘಟ್ಟ ಗ್ರಾಮದ ಬಳಿ ನಡೆದಿದೆ.

ಮದ್ದೂರು ತಾಲೂಕಿನ ಕ್ಯಾತಘಟ್ಟ ಗ್ರಾಮದ ಬಳಿ ಅವಘಡ ಸಂಭವಿಸಿದೆ. ಆಲಭುಜನಹಳ್ಳಿಯ ಚೇತನ್(14), ದರ್ಶನ್(15) ಮೃತಪಟ್ಟವರು ಎಂದು ಹೇಳಲಾಗಿದೆ. ಗ್ರಾಮದ ಸಮೀಪದ ಹಳ್ಳದಲ್ಲಿ ಈಜಲು ಹೋಗಿದ್ದಾಗ ದುರಂತ ನಡೆದಿದೆ. ಇಬ್ಬರು ಬಾಲಕರ ಶವಗಳನ್ನು ಅಗ್ನಿಶಾಮಕ ದಳ ಸಿಬ್ಬಂದಿ ಹೊರಗೆ ತೆಗೆದಿದ್ದಾರೆ. ಕೆಎಂ ದೊಡ್ಡಿ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular