ರಾಯಚೂರು : ರಾಯಚೂರಿನಲ್ಲಿ ಘೋರ ದುರಂತ ಸಂಭವಿಸಿದ್ದು, ಆರ್ ಟಿಪಿಎಸ್ ಘಟಕದಲ್ಲಿ ವಿದ್ಯುತ್ ಸ್ಪರ್ಶಿಸಿ ಓರ್ವ ಕಾರ್ಮಿಕ ಮೃತಪಟ್ಟಿದ್ದಾನೆ.
ರಾಯಚೂರಿನ ಶಕ್ತಿ ನಗರದಲ್ಲಿರುವ ಆರ್ ಟಿಪಿಎಸ್ ಘಟಕದಲ್ಲಿ ಈ ಘಟನೆ ನಡೆದಿದೆ. ಘಟಕದಲ್ಲಿ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಓರ್ವ ಮೃತಪಟ್ಟಿದ್ದು, ಮೃತನನ್ನು ತಿಮ್ಮಾರೆಡ್ಡಿ (28 ) ಎಂದು ಗುರುತಿಸಲಾಗಿದೆ.
ಶಕ್ತಿನಗರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮೃತಪಟ್ಟ ಕಾರ್ಮಿಕನ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕೆಂದು ಕಾರ್ಮಿಕರು ಆಗ್ರಹಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
TAGGED:ವಿದ್ಯುತ್ ಸ್ಪರ್ಶಿಸಿ