ತೆಲಂಗಾಣದಲ್ಲಿ ನಡೆದ ದಾರುಣ ಘಟನೆಯೊಂದರಲ್ಲಿ ಚಿಕಿತ್ಸೆಗೆಂದು ಆಸ್ಪತ್ರೆಗೆ ಬರುತ್ತಿದ್ದ ವೇಳೆ ಬೃಹತ್ ಮರವೊಂದು ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಅವರ ಪತ್ನಿಗೆ ಗಂಭೀರ ಗಾಯಗಳಾಗಿವೆ.
ಹೈದರಾಬಾದ್‌ನ ಸಿಕಂದರಾಬಾದ್‌ನಲ್ಲಿ ಬೊಳ್ಳಾರಂ ಕಂಟೋನ್ಮೆಂಟ್ ಆಸ್ಪತ್ರೆಯಲ್ಲಿ ನಡೆದ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಘಟನೆಯ ವೀಡಿಯೊದಲ್ಲಿ, ದಂಪತಿ ಆಸ್ಪತ್ರೆ ಗೇಟ್ ಪ್ರವೇಶಿಸುತ್ತಿದ್ದಾಗ ಇದ್ದಕ್ಕಿದ್ದಂತೆ ಮರವೊಂದು ಅವರ ಮೇಲೆ ಬೀಳುತ್ತೆ. ಪರಿಣಾಮ ತೀವ್ರ ರಕ್ತಸ್ರಾವದಿಂದ ಪತಿ ಸ್ಥಳದಲ್ಲೇ ಸಾವನ್ನಪ್ಪಿದ್ರೆ, ಪತ್ನಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಈ ವೇಳೆ ಭದ್ರತಾ ಸಿಬ್ಬಂದಿ ಮತ್ತು ಸುತ್ತಮುತ್ತಲಿನ ಇತರ ಜನರು ದಂಪತಿಗೆ ಸಹಾಯ ಮಾಡಲು ಓಡಿ ಬರುತ್ತಾರೆ.
ಅದೃಷ್ಟವಶಾತ್ ಇದೇ ವೇಳೆ ಸ್ಕೂಟರ್‌ನಲ್ಲಿ ಬಂದ ಮತ್ತೊಬ್ಬ ವ್ಯಕ್ತಿ ಸಕಾಲಕ್ಕೆ ವಾಹನ ನಿಲ್ಲಿಸಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ದಂಪತಿಯನ್ನು ರವೀಂದರ್ ಮತ್ತು ಸರಳಾ ದೇವಿ ಎಂದು ಗುರುತಿಸಲಾಗಿದೆ. ಸ್ಥಳೀಯ ಮಾಧ್ಯಮಗಳ ವರದಿಗಳ ಪ್ರಕಾರ, ಮಹಿಳೆಯನ್ನು ತಕ್ಷಣ ಚಿಕಿತ್ಸೆಗಾಗಿ ಗಾಂಧಿ ಆಸ್ಪತ್ರೆಗೆ ಸಾಗಿಸಲಾಯಿತು. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸ್ ತಂಡ ರವೀಂದರ್ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಗಾಂಧಿ ಆಸ್ಪತ್ರೆಗೆ ಸಾಗಿಸಿದೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ವರದಿಗಳು ತಿಳಿಸಿವೆ.
https://Twitter.com/ShabazBaba/status/1792830512148664657?ref_src=twsrc%5Etfw%7Ctwcamp%5Etweetembed%7Ctwterm%5E1792830512148664657%7Ctwgr%5E8ba7ba85f152d5d9ff48fce1bddb94ad45752e59%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fenglish%2Fthefreepressjournal-epaper-dhecf5ddffe11b4f36b496f4bee6e60122%2Ftragicvideomassivetreefallsonscooterbornecouplewhileenteringhospitalinsecunderabadhusbanddiesonspot-newsid-n610502526
https://Twitter.com/yasarullah/status/1792823325133324503?ref_src=twsrc%5Etfw%7Ctwcamp%5Etweetembed%7Ctwterm%5E1792823325133324503%7Ctwgr%5E8ba7ba85f152d5d9ff48fce1bddb94ad45752e59%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fenglish%2Fthefreepressjournal-epaper-dhecf5ddffe11b4f36b496f4bee6e60122%2Ftragicvideomassivetreefallsonscooterbornecouplewhileenteringhospitalinsecunderabadhusbanddiesonspot-newsid-n610502526