HomeLatest Newsಫೆಬ್ರವರಿ 16ರಂದು ಕೆಲ ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಫೆಬ್ರವರಿ 16ರಂದು ಕೆಲ ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು: ಪ್ರಯಾಣಿಕರ ಗಮನಕ್ಕೆ ಫೆಬ್ರವರಿ 16ರಂದು ಕೆಲ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ ಎಂದು ರೈಲ್ವೆ ಇಲಾಖೆ ಮಾಹಿತಿ ನೀಡಿದೆ.

ಹಬ್ಬನಘಟ್ಟ-ಅರಸೀಕೆರೆ ನಡುವೆ ಕಾಲುವೆ ಕಾಮಗಾರಿ ನಡೆಯುತ್ತಿರುವುದರಿಂದ ಕೆಲ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಮೈಸೂರು-ಅರಸೀಕೆರೆ ಮತ್ತು ತಾಳಗುಪ್ಪ ಮಾರ್ಗದ ಕೆಲವು ರೈಲುಗಳು ರದ್ದಾಗಲಿವೆ, ಇನ್ನು ಕೆಲ ರೈಲುಗಳು ವಿಳಂಬವಾಗಿ ಸಂಚರಿಸಲಿವೆ ಎಂದು ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹಬ್ಬನಘಟ್ಟ- ಅರಸೀಕೆರೆ ನಿಲ್ದಾಣಗಳ ಮಧ್ಯೆ ವಿಶ್ವೇಶ್ವರಯ್ಯ ಜಲ ನಿಗಮ್ ಲಿಮಿಟೆಡ್ ವತಿಯಿಂದ ಕಾಲುವೆ ಕ್ರಾಸಿಂಗ್ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಫೆಬ್ರವರಿ 16ರ ಸೋಮವಾರದಂದು ಕೆಲ ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಲಿದೆ.

ಈ ರೈಲುಗಳು ರದ್ದು:
ರೈಲು ಸಂಖ್ಯೆ 56267 ಅರಸೀಕೆರೆ–ಮೈಸೂರು ಪ್ಯಾಸೆಂಜರ್
ರೈಲು ಸಂಖ್ಯೆ 16206 ಮೈಸೂರು–ತಾಳಗುಪ್ಪ ಎಕ್ಸ್‌ಪ್ರೆಸ್
ರೈಲು ಸಂಖ್ಯೆ 16205 ತಾಳಗುಪ್ಪ–ಮೈಸೂರು ಎಕ್ಸ್‌ಪ್ರೆಸ್ ರೈಲುಗಳು ರದ್ದಾಗಲಿವೆ.

ಇನ್ನು ರೈಲು ಸಂಖ್ಯೆ 16225 ಮೈಸೂರು–ಶಿವಮೊಗ್ಗ ಟೌನ್ ಎಕ್ಸ್‌ಪ್ರೆಸ್ ಮೈಸೂರು–ಅರಸೀಕೆರೆನಡುವಿನ ಸಂಚಾರವನ್ನು ಭಾಗಶಃ ರದ್ದುಪಡಿಸಲಾಗಿದ್ದು, ಅರಸೀಕೆರೆಯಿಂದ ತನ್ನ ನಿಗದಿತ ವೇಳೆಗೆ ಪ್ರಯಾಣ ಆರಂಭಿಸಲಿದೆ.

ರೈಲು ಸಂಖ್ಯೆ 56266 ಮೈಸೂರು–ಅರಸೀಕೆರೆ ಪ್ಯಾಸೆಂಜರ್ ರೈಲು 110 ನಿಮಿಷಗಳ ಕಾಲ ಮತ್ತು ರೈಲು ಸಂಖ್ಯೆ 16221 ತಾಳಗುಪ್ಪ–ಮೈಸೂರು ಎಕ್ಸ್‌ಪ್ರೆಸ್ ರೈಲನ್ನು 100 ನಿಮಿಷಗಳ ಕಾಲ ಮಾರ್ಗ ಮಧ್ಯೆ ನಿಯಂತ್ರಿಸಲಾಗುತ್ತದೆ.

ಈ ರೈಲುಗಳ ಸಂಚಾರ ವಿಳಂಬ:
ರೈಲು ಸಂಖ್ಯೆ 56265 ಅರಸೀಕೆರೆ–ಮೈಸೂರು ಪ್ಯಾಸೆಂಜರ್ ರೈಲು ಅರಸೀಕೆರೆಯಿಂದ 100 ನಿಮಿಷಗಳ ವಿಳಂಬದೊಂದಿಗೆ ಮತ್ತು ರೈಲು ಸಂಖ್ಯೆ 06269 ಮೈಸೂರು–ಎಸ್‌ಎಂವಿಟಿ ಬೆಂಗಳೂರು ಪ್ಯಾಸೆಂಜರ್ ವಿಶೇಷ ರೈಲು ಮೈಸೂರಿನಿಂದ 100 ನಿಮಿಷಗಳ ವಿಳಂಬದೊಂದಿಗೆ ಸಂಚಾರ ನಡೆಸಲಿದೆ ಎಂದು ರೈಲ್ವೇ ಇಲಾಖೆ ತಿಳಿಸಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular