HomeIndiaBIG UPDATE : ಆಂಧ್ರಪ್ರದೇಶದಲ್ಲಿ ಭೀಕರ ರೈಲು ದುರಂತ : 12 ರೈಲುಗಳ ಸಂಚಾರ...

BIG UPDATE : ಆಂಧ್ರಪ್ರದೇಶದಲ್ಲಿ ಭೀಕರ ರೈಲು ದುರಂತ : 12 ರೈಲುಗಳ ಸಂಚಾರ ರದ್ದು

ಆಂಧ್ರಪ್ರದೇಶದಲ್ಲಿ ರೈಲು ದುರಂತ ( Train Accident)  ನಡೆದ ಹಿನ್ನೆಲೆ ಪರಿಣಾಮ 12 ರೈಲುಗಳ ಸಂಚಾರ ರದ್ದಾಗಿದೆ.

ಆಂಧ್ರಪ್ರದೇಶದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಹೆಚ್ಚುತ್ತಿದೆ. ಕಾಂತಕಪಲ್ಲಿ ರೈಲ್ವೆ ನಿಲ್ದಾಣದ ಬಳಿ ಎರಡು ರೈಲುಗಳು ಡಿಕ್ಕಿ ಹೊಡೆದಿವೆ. ಘಟನೆಯಲ್ಲಿ 14 ಜನರು ಸಾವನ್ನಪ್ಪಿದ್ದಾರೆ .
ಭಾನುವಾರ ಆಂಧ್ರ ಪ್ರದೇಶದ ವಿಜಯನಗರದಲ್ಲಿ ಎರಡು ಪ್ಯಾಸೆಂಜರ್ ರೈಲುಗಳ ಮಧ್ಯೆ ಸಂಭವಿಸಿದ ಅಪಘಾತದ ನಂತರ 12 ರೈಲುಗಳನ್ನು ರದ್ದುಗೊಳಿಸಲಾಗಿದೆ. ಹಾಗೂ 15 ರೈಲುಗಳ ಮಾರ್ಗಗಳನ್ನು ಬದಲಾಯಿಸಲಾಗಿದೆ ಎಂದು ರೈಲ್ವೇ ಇಲಾಖೆ ಮಾಹಿತಿ ನೀಡಿದೆ.

ವಿಶಾಖಪಟ್ಟಣಂ-ರಾಯಗಡ ಪ್ಯಾಸೆಂಜರ್ ರೈಲು ವಿಜಯನಗರಂ ಜಿಲ್ಲೆಯ ಕೊಥವಲಸ ಮಂಡಲದ ಕಾಂತಕಪಲ್ಲಿ ರೈಲ್ವೆ ನಿಲ್ದಾಣದ ಬಳಿ ಸಿಗ್ನಲ್ ಗಾಗಿ ನಿಂತಿತು. ಅದೇ ಟ್ರ್ಯಾಕ್ನಲ್ಲಿ ಬಂದ ಪಲಾಸಾ ಎಕ್ಸ್ಪ್ರೆಸ್ ವಿಶಾಖಪಟ್ಟಣಂ-ರಾಯಗಡ ಪ್ಯಾಸೆಂಜರ್ ರೈಲಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ವಿಶಾಖಪಟ್ಟಣಂ-ರಾಯಗಡ ಪ್ಯಾಸೆಂಜರ್ ರೈಲಿನ ಮೂರು ಬೋಗಿಗಳು ಹಳಿ ತಪ್ಪಿವೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular