HomeKarnatakaಗಮನಿಸಿ: ನ. 23, 24ರಂದು ರೈಲು ಸೇವೆಯಲ್ಲಿ ವ್ಯತ್ಯಯ

ಗಮನಿಸಿ: ನ. 23, 24ರಂದು ರೈಲು ಸೇವೆಯಲ್ಲಿ ವ್ಯತ್ಯಯ

ನವೆಂಬರ್ 23, 24ರಂದು ಕೆಲವು ರೈಲುಗಳ ಸೇವೆಯಲ್ಲಿ ವ್ಯತ್ಯಯವಾಗಲಿದೆ. ನಿಡವಂದ ಯಾರ್ಡ್ ನಲ್ಲಿ ರೈಲ್ವೆ ಸುರಕ್ಷತಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕೆಲವು ರೈಲುಗಳ ಸಂಚಾರ ರದ್ದು ಮಾಡಲಾಗಿದ್ದು, ಮತ್ತೆ ಕೆಲವು ರೈಲುಗಳು ವಿಳಂಬವಾಗಿ ಹೊರಡಲಿವೆ.

ಸಂಚಾರ ರದ್ದಾದ ರೈಲುಗಳು:

ನವೆಂಬರ್ 23 ರಂದು ಚಿಕ್ಕಮಗಳೂರು -ಯಶವಂತಪುರ ಡೈಲಿ ಎಕ್ಸ್ಪ್ರೆಸ್(ರೈಲು ಸಂಖ್ಯೆ: 16239) ಮತ್ತು ಯಶವಂತಪುರ -ಚಿಕ್ಕಮಗಳೂರು ಡೈಲಿ ಎಕ್ಸ್ಪ್ರೆಸ್(16240) ರೈಲಿನ ಸಂಚಾರ ರದ್ದು ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಡವಾಗಿ ಹೊರಡುವ ರೈಲುಗಳು:

ನವೆಂಬರ್ 24ರಂದು ಕೆ.ಎಸ್.ಆರ್. ಬೆಂಗಳೂರು -ಧಾರವಾಡ ಸಿದ್ದಗಂಗಾ ಡೈಲಿ ಎಕ್ಸ್ಪ್ರೆಸ್(12725) ರೈಲು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ನಿಲ್ದಾಣದಿಂದ 30 ನಿಮಿಷ ತಡವಾಗಿ ಹೊರಡಲಿದೆ.

ಯಶವಂತಪುರ – ಶಿವಮೊಗ್ಗ ಟೌನ್ ಇಂಟರ್ಸಿಟಿ ಡೈಲಿ ಎಕ್ಸ್ಪ್ರೆಸ್(16579) ರೈಲು ಯಶವಂತಪುರದಿಂದ 90 ನಿಮಿಷ ತಡವಾಗಿ ಹೊರಡಲಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular