HomeKarnatakaBIG NEWS: ಚಲಿಸುತ್ತಿದ್ದ ರೈಲಿನಿಂದ ಹೇಮಾವತಿ ನದಿಗೆ ಬಿದ್ದ ವಿದ್ಯಾರ್ಥಿ: ಮುಂದೇನಾಯ್ತು?

BIG NEWS: ಚಲಿಸುತ್ತಿದ್ದ ರೈಲಿನಿಂದ ಹೇಮಾವತಿ ನದಿಗೆ ಬಿದ್ದ ವಿದ್ಯಾರ್ಥಿ: ಮುಂದೇನಾಯ್ತು?

ಹಾಸನ: ಚಲಿಸುತ್ತಿದ್ದ ರೈಲಿನಿಂದ ವಿದ್ಯಾರ್ಥಿಯೋರ್ವ ಆಯತಪ್ಪಿ ಹೇಮಾವತಿ ನದಿಗೆ ಬಿದ್ದ ಘಟನೆ ಹಾಸನ ಜಿಲ್ಲೆಯ ಹೊಳೆನರಸಿಪುರ ಪಟ್ಟಣದಲ್ಲಿ ನಡೆದಿದೆ.

17 ವರ್ಷದ ಮುಜಾವೀರ್ ನದಿಗೆ ಬಿದ್ದ ವಿದ್ಯಾರ್ಥಿ. ಪ್ರಥಮ ಪಿಯು ಓದುತ್ತಿದ್ದ ವಿದ್ಯಾರ್ಥಿ, ಕೆ.ಆರ್.ನಗರದಿಂದ ಹಾಸನಕ್ಕೆ ಎಕ್ಸ್ ಪ್ರೆಸ್ ರೈಲಿನಲ್ಲಿ ತೆರಳುತ್ತಿದ್ದ. ಚಲಿಸುತ್ತಿದ್ದ ರೈಲಿನ ಬೋಗಿಯ ಮೆಟ್ಟಿಲ ಮೇಲೆ ಒಂದುಕಾಲಿಟ್ಟು, ಇನ್ನೊಂದು ಕಾಲು ಹೊರಹಾಕಿ ನಿಂತಿದ್ದ ಈ ವೇಳೆ ಏಕಾಏಕಿ ನಿಯಂತ್ರಣ ತಪ್ಪಿದ ವಿದ್ಯಾರ್ಥಿ ಹೇಮಾವತಿ ನದಿಗೆ ಬಿದ್ದಿದ್ದಾನೆ.

ನದಿಯಲಿ ನೀರಿನ ಹರಿವಿನ ಪ್ರಮಾಣ ಕಡಿಮೆ ಇದ್ದುದರಿಂದ  ಬಂಡೆಗಳನ್ನು ಹಿಡಿದುಕೊಂಡು ಕಿರುಚಾಡುತ್ತಿದ್ದ. ಕಿರುಚಾಟ ಕೇಳಿ ಸ್ಥಳೀಯರು ನದಿಗೆ ಇಳಿದು ಆತನನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಹೊಳೆನರಸಿಪುರ ಆಸ್ಪತ್ರೆಗೆ ದಾಖಲಿಸಿ ವಿದ್ಯಾರ್ಥಿಗೆ ಚಿಕಿತ್ಸೆ ನೀಡಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular