HomeKarnatakaರಾತ್ರೋರಾತ್ರಿ ರೈಲ್ವೆ ಹಳಿ ಕಂಬಿಗಳನ್ನೇ ದೋಚಿದ ಕಳ್ಳರು

ರಾತ್ರೋರಾತ್ರಿ ರೈಲ್ವೆ ಹಳಿ ಕಂಬಿಗಳನ್ನೇ ದೋಚಿದ ಕಳ್ಳರು

ಬೆಂಗಳೂರು: ರೈಲ್ವೆ ಹಳಿಯ ಕಂಬಿಗಳನ್ನು ರಾತ್ರಿ ವೇಳೆ ಕಳವು ಮಾಡಿ ಮಾರಾಟ ಮಾಡುತ್ತಿರುವ ಸಂಗತಿ ಬೆಳಕಿಗೆ ಬಂದಿದೆ.

ಬೆಂಗಳೂರಿನಿಂದ ತಮಿಳುನಾಡಿಗೆ ಹೊಸ ರೈಲ್ವೆ ಹಳಿ ಮಾರ್ಗದ ಕಾಮಗಾರಿ ನಡೆಯುತ್ತಿದ್ದು, ಕಾರ್ ಮಿಲಾರಾಮ್ ರೈಲು ನಿಲ್ದಾಣದ ಬಳಿ ಸಂಗ್ರಹಿಸಿದ್ದ ಕಂಬಿಗಳನ್ನು ಗೂಡ್ಸ್ ವಾಹನಗಳಲ್ಲಿ ಸಾಗಾಟ ಮಾಡಲಾಗಿದೆ. ಪೊಲೀಸರು ವಾಹನ ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸ್ಥಳೀಯ ಯುವಕರು ಕಂಬಿಗಳನ್ನು ಕಳವು ಮಾಡಿ ಸಾಗಾಟ ಮಾಡುತ್ತಿದ್ದರು. ವಾಹನದ ಮಾಲೀಕ ಪೆರಿಯಣ್ಣನ್ ಎಂಬುದು ಗೊತ್ತಾಗಿದೆ. ಕಂಬಿಗಳನ್ನು ಗುಜರಿಗೆ ಸಾಗಾಟ ಮಾಡಿ ಅಲ್ಲಿಂದ ಆಂಧ್ರಪ್ರದೇಶದ ಹಿಂದೂಪುರಕ್ಕೆ ರವಾನಿಸಲು ಯೋಜಿಸಲಾಗಿತ್ತು. ಉದ್ದನೆಯ ಕಂಬಿಗಳನ್ನು ಗ್ಯಾಸ್ ಕಟರ್ ಬಳಸಿ ತುಂಡರಿಸಲಾಗಿದೆ. ಸೂಕ್ತ ದಾಖಲೆ ಇಲ್ಲದ ಕಾರಣ ಪೊಲೀಸರು ವಾಹನ ವಶಕ್ಕೆ ಪಡೆದುಕೊಂಡು ತನಿಖೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular