ನಾಸಿಕ್: ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದು, ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ನಡೆದಿದೆ.
ನಾಸಿಕ್ ರೈಲು ನಿಲ್ದಾಣದಲ್ಲಿ ಈ ದುರಂತ ಸಂಭವಿಸಿದೆ. ಛತ್ ಪೂಜೆಗೆಂದು ಊರಿಗೆ ಹೋಗಿ ಬಂದಿದ್ದ ಮೂವರು ನಾಸಿಕ್ ರೈಲು ನಿಲ್ದಾಣದಲ್ಲಿ ನಿಂತಿದ್ದರು. ರೈಲೊಂದು ನಾಸಿಕ್ ನಿಲ್ದಾಣದ ಮೂಲಕ ಸಾಗುತ್ತಿತ್ತು. ಆದರೆ ನಾಸಿಕ್ ರೈಲು ನಿಲ್ದಾಣದಲ್ಲಿ ರೈಲು ನಿಲುಗಡೆ ಇರಲಿಲ್ಲ, ನಿಲ್ದಾಣದಲ್ಲಿ ರೈಲು ನಿಧಾನವಾಗಿ ಸಾಗುತ್ತಿದ್ದ ವೇಳೆ ಮೂವರೂ ಚಲಿಸುತ್ತಿದ್ದ ರೈಲು ಹತ್ತಲು ಹೋಗಿ ಕೆಳಗೆ ಬಿದ್ದಿದ್ದಾರೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಓರ್ವ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರ ಹಾಗೂ ಗಾಯಾಳು ಗುರುತು ಪತ್ತೆಯಾಗಿಲ್ಲ. ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.