HomeLatest NewsBIG NEWS: ಡಿಆರ್ ಐ ಭರ್ಜರಿ ಬೇಟೆ: ರೈಲಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ಮೌಲ್ಯದ...

BIG NEWS: ಡಿಆರ್ ಐ ಭರ್ಜರಿ ಬೇಟೆ: ರೈಲಿನಲ್ಲಿ ಸಾಗಿಸುತ್ತಿದ್ದ 9 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ

ಬೆಂಗಳೂರು: ಡಿಆರ್ ಐ ಭರ್ಜರಿ ಕಾರ್ಯಾಚರಣೆ ನಡೆಸಿದೆ. ದೆಹಲಿಯಿಂದ ಬೆಂಗಳೂರಿಗೆ ರಾಜಧಾನಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಸಾಗಾಟ ಮಾಡುತ್ತಿದ್ದ 9 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಲಾಗಿದೆ.

ನಾಯಿಗೆ ನೀಡುವ ಆಹಾರದ ಪ್ಯಾಕೆಟ್‌ಗಳಲ್ಲಿ ಅಡಗಿಸಿ, ಯಾರಿಗೂ ಅನುಮಾನ ಬಾರದಂತೆ ಡ್ರಗ್ಸ್ ಗಳನ್ನು ಸಾಗಿಸಲು ಯತ್ನಿಸಲಾಗಿತ್ತು. ಖಚಿತ ಮಾಅಹಿತಿ ಮೇರೆಗೆ ಡಿಆರ್ ಐ ಅಧಿಕಾರಿಗಳು ದಾಳಿ ನಡೆಸಿದ್ದು, ಕಾರ್ಯಪ್ರವೃತ್ತರಾಗಿ ರೈಲಿನಲ್ಲಿಯೇ ಈ ದಂಧೆಯನ್ನು ಪತ್ತೆ ಹಚ್ಚಿ, ಡ್ರಗ್ಸ್ ಸಹಿತ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ವ್ಯಕ್ತಿಯ ಜೊತೆ ಸಂಪರ್ಕದಲ್ಲಿದ್ದ ಮತ್ತಿಬ್ಬರನ್ನೂ ಕೂಡ ಅಧಿಕಾರಿಗಳು ಅರೆಸ್ಟ್​​ ಮಾಡಿದ್ದಾರೆ. ಬಂಧಿತ ಆರೋಪಿಯ ಬೆಂಗಳೂರಿನ ಮನೆಯಲ್ಲಿ ಶೋಧ ನಡೆಸಿದಾಗ 40 ಡೆಬಿಟ್ ಕಾರ್ಡ್‌ಗಳು ಮತ್ತು 70ಕ್ಕೂ ಹೆಚ್ಚು ಸಿಮ್ ಕಾರ್ಡ್‌ಗಳು ಪತ್ತೆಯಾಗಿವೆ. ಆರೋಪಿಯನ್ನು ಬಂಧಿಸಿ ತನಿಖೆ ಮುಂದುವರೆಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular