HomeKarnatakaಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿ : ಅರ್ಜಿ ಆಹ್ವಾನ

ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿ : ಅರ್ಜಿ ಆಹ್ವಾನ

ಬಳ್ಳಾರಿ : ಪ್ರಸಕ್ತ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣದಲ್ಲಿ ತರಬೇತಿ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಮಮತಾ ಅವರು ತಿಳಿಸಿದ್ದಾರೆ.

ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ಎರಡು ವರ್ಷಗಳ ವೃತ್ತಿ ತರಬೇತಿ ನೀಡಲಾಗುವುದು ಮತ್ತು ಶಿಷ್ಯವೇತನ ಒಳಗೊಂಡಿರುತ್ತದೆ.ಅರ್ಹ ಪದವೀಧರರು ಜುಲೈ 31ರ ಒಳಗಾಗಿ ಇಲಾಖೆಯ ವೆಬ್ಸೈಟ್ www.sw.kar.nic.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿ, ಸಂಬಂಧಪಟ್ಟ ದಾಖಲಾತಿಗಳ ದೃಢೀಕೃತ ಪ್ರತಿಗಳನ್ನು ಅರ್ಜಿಯೊಂದಿಗೆ 2 ಸೆಟ್ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು.

ಬೇಕಾದ ದಾಖಲೆಗಳು: ಆಧಾರ್ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಎಸ್ಎಸ್ಎಲ್ಸಿ, ಪಿಯುಸಿ, ಪದವಿ ಪ್ರಮಾಣ ಪತ್ರ ಹಾಗೂ ಮೂರು ವರ್ಷಗಳ ಕಾನೂನು ಪದವಿಯ ಅಂಕಪಟ್ಟಿಗಳು, ಬಾರ್ ಕೌನ್ಸಿಲ್ನಲ್ಲಿ ನೋಂದಾಯಿಸಿದ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ಬುಕ್ ಜೆರಾಕ್ಸ್, 4 ಭಾವಚಿತ್ರ.ಹೆಚ್ಚಿನ ಮಾಹಿತಿಗಾಗಿ ನಗರದ ಕೌಲ್ಬಜಾರ್ನ 1ನೇ ಗೇಟ್ ರೈಲ್ವೇ ಗೇಟ್ ಹತ್ತಿರದ ಡಾ.ಬಿ.ಆರ್.ಅಂಬೇಡ್ಕರ್ ಭವನದ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಅಥವಾ ದೂ:08392-244738, ಮೊ.9480843073 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular