ಚಿತ್ರದುರ್ಗ : ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿಯರಿಗೆ ಸುಗಮ ಸಂಗೀತ, ಹಾರ್ಮೋನಿಯಂ ಹಾಗೂ ತಬಲಾ ವಾದ್ಯ ಕಲಿಕಾ ತರಬೇತಿ ಕಾರ್ಯಕ್ರಮ ಉದ್ಘಾಟನಾ ಸಮಾರಂಭವನ್ನು ಆಗಸ್ಟ್ 01ರಂದು ಸಂಜೆ 5ಕ್ಕೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆಯ ಸರ್ಕಾರಿ ಪರಿಶಿಷ್ಟ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ಆಯೋಜಿಸಲಾಗಿದೆ.
ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್ ಉದ್ಘಾಟನೆ ನೆರವೇರಿಸುವರು. ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹೆಚ್.ದಿವಾಕರ್ ಅಧ್ಯಕ್ಷತೆ ವಹಿಸುವರು. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ ಪ್ರಾಸ್ತಾವಿಕ ನುಡಿಗಳನ್ನಾಡುವರು. ಮುಖ್ಯ ಅತಿಥಿಗಳಾಗಿ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಂ.ಟಿ.ಶಿವರಾಜ್, ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ನಿಲಯ ಪಾಲಕಿ ಕೆ.ಎಸ್.ವೈಶಾಲಿ ಭಾಗವಹಿಸುವರು. ಹೊಸದುರ್ಗದ ಸುಗಮ ಸಂಗೀತ ಕಲಾವಿದ ಓ.ಮೂರ್ತಿ ಪ್ರಾಸ್ತಾವಿಕ ನುಡಿಗಳನ್ನಾಡುವರು ಎಂದು ಪ್ರಕಟಣೆ ತಿಳಿಸಿದೆ.