ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ನಡೆದ ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ RCB, DNA, KSCA ವಿರುದ್ಧ ಕ್ರಿಮಿನಲ್ ಕೇಸ್ ಹಾಕಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಹೌದು, ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಪೊಲೀಸ್ ಇಲಾಖೆ ವಿರುದ್ಧ ಇಲಾಖಾ ತನಿಖೆಗೆ ಕ್ಯಾಬಿನೆಟ್ ನಿರ್ಧರಿಸಿದ್ದು, RCB, DNA, KSCA ವಿರುದ್ಧ ಕ್ರಿಮಿನಲ್ ಕೇಸ್ ಹಾಕಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಆರ್ ಸಿಬಿ ಸಂಭ್ರಮಾಚರಣೆ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ನಡೆದ ಭೀಕರ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದರು.18 ವರ್ಷಗಳ ಬಳಿಕ ಐಎಲ್ ಟ್ರೋಫಿ ಗೆದ್ದ ಆರ್ ಸಿಬಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲೆಂದು ಚಿನ್ನಸ್ವಾಮಿ ಸ್ಟೇಡಿಯಂಗೆ ಬಂದಿದ್ದ ಅಭಿಮಾನಿಗಳಲ್ಲಿ 11 ಜನರು ಕಾಲ್ತುಳಿತ ಘಟನೆಯಲ್ಲಿ ಸಾವನ್ನಪ್ಪಿದ್ದರು. ಹಲವರು ಗಂಭೀರವಾಗಿ ಗಾಯಗೊಂಡಿದ್ದರು.
You Might Also Like
TAGGED:ಕ್ರಿಮಿನಲ್ ಕೇಸ್